ಮುಂಬೈ: ಸತತ ಬ್ಯಾಟಿಂಗ್ ವೈಫಲ್ಯದಿಂದ ಕಂಗಾಲಾಗಿದ್ದ ಆರ್‌ಸಿಬಿ ಮಾಜಿ ನಾಯಕ ವಿರಾಟ್ ಕೊಹ್ಲಿ ಇಂದಿನ ಪಂದ್ಯದಲ್ಲಿ ಅಬ್ಬರಿಸಿದ್ದಾರೆ.
ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಐಪಿಎಲ್ 2022ರ ಆವೃತ್ತಿಯಲ್ಲಿ ತಮ್ಮ ಮೊದಲ ಅರ್ಧಶತಕ ದಾಖಲಿಸಿದ್ದಾರೆ. ಅವರು 45 ಎಸೆತಗಳಲ್ಲಿ 50 ರನ್ ದಾಖಲಿಸಿದರು. ಈ ವೇಳೆ ಅವರ ಪತ್ನಿ, ನಟಿ ಅನುಷ್ಕಾ ಶರ್ಮಾ ಚಪ್ಪಾಳೆ ತಟ್ಟಿ ಹುರಿದುಂಬಿಸಿದರು. ಇನ್ನು ಕಳೆದ ಐದು ಇನ್ನಿಂಗ್ಸ್‌ಗಳಲ್ಲಿ ವಿರಾಟ್ ಕೊಹ್ಲಿ 22 ರನ್ ಗಳಿಸಿದ್ದರು.
ರಾಟ್ ಕೊಹ್ಲಿ ಹಾಗೂ ರಜತ್ ಪಟಿದಾರ್ ಅರ್ಧಶತಕದ ಸಹಾಯದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ತಂಡಕ್ಕೆ 171 ರನ್‌ಗಳ ಸವಾಲು ನೀಡಿದೆ.
PublicNext
30/04/2022 05:37 pm