ಮುಂಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಭಾಗವಾಗಿ ನಡೆಯುತ್ತಿರುವ 44ನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ತಂಡವು ಮೊದಲು ಬ್ಯಾಟಿಂಗ್ ಮಾಡಲಿದೆ.
ಈ ಬಾರಿಯ ಟೂರ್ನಿಯಲ್ಲಿ ಮಂಕಾಗಿರುವ ಮುಂಬೈ ತಂಡವು ಈವರೆಗೂ ಆಡಿರುವ 8 ಪಂದ್ಯಗಳಲ್ಲೂ ಸೋಲು ಕಂಡಿದೆ. ಇಂದಿನ ಪಂದ್ಯದಲ್ಲಾದರೂ ಗೆಲುವು ಸಾಧಿಸಿತ್ತಾ ಎಂಬ ಕುತೂಹಲ ಮೂಡಿದೆ. ಇನ್ನು ಉತ್ತಮ ಪ್ರದರ್ಶನ ನೀಡುತ್ತಿರುವ ರಾಜಸ್ಥಾನ್ ತಂಡವು ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ.
PublicNext
30/04/2022 07:14 pm