ಮುಂಬೈ: ಜೋಸ್ ಬಟ್ಲರ್ ಅರ್ಧಶತಕದ ಸಹಾಯದಿಂದ ರಾಜಸ್ಥಾನ್ ರಾಯಲ್ಸ್ ತಂಡವು ಮುಂಬೈ ಇಂಡಿಯನ್ಸ್ ತಂಡಕ್ಕೆ 159 ರನ್‌ಗಳ ಗುರಿ ನೀಡಿದೆ.
ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಭಾಗವಾಗಿ ನಡೆಯುತ್ತಿರುವ 44ನೇ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ತಂಡವು 6 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿದೆ.
ರಾಜಸ್ಥಾನ್ ರಾಯಲ್ಸ್ ಪರ ಜೋಸ್ ಬಟ್ಲರ್ 67 ರನ್, ಆರ್. ಅಶ್ವಿನ್ 21 ರನ್ ಗಳಿಸಿದರು. ಉಳಿದಂತೆ ನಾಯಕ ಸಂಜು ಸ್ಯಾಮ್ಸನ್, ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೇಯರ್ ಹಾಗೂ ರಿಯಾನ್ ಪರಾಗ್ ಬ್ಯಾಟಿಂಗ್ ವೈಫಲ್ಯ ಎದುರಿಸಿದರು.
PublicNext
30/04/2022 09:35 pm