ಮುಂಬೈ: ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಮುಂಬೈನ ಡಿ.ವೈ. ಪಾಟೀಲ್ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಭಾಗವಾಗಿ ನಡೆಯುತ್ತಿರುವ 48ನೇ ಪಂದ್ಯದಲ್ಲಿ ಕನ್ನಡಿಗ ಮಯಾಂಕ್ ಅಗರ್ವಾಲ್ ನೇತೃತ್ವದ ಗುಜರಾತ್ ತಂಡವು ಮೊದಲು ಬೌಲಿಂಗ್ ಮಾಡಲಿದೆ. ಇಂದಿನ ಪಂದ್ಯದಲ್ಲಿ ಪಂಜಾಬ್ ತಂಡವು ಭಾರಿ ಅಂತರದ ಗೆಲುವು ಸಾಧಿಸಿದರೆ ಅಂಕಪಟ್ಟಿಯಲ್ಲಿ ನಾಲ್ಕು ಅಥವಾ ಐದನೇ ಸ್ಥಾನಕ್ಕೆ ಜಿಗಿಯುವ ಸಾಧ್ಯತೆ ಇದೆ.
PublicNext
03/05/2022 07:14 pm