ಮುಂಬೈ: ಸಾಯಿ ಸುದರ್ಶನ್ ಅರ್ಧಶತಕದ ಸಹಾಯದಿಂದ ಗುಜರಾತ್ ಟೈಟಾನ್ಸ್ ತಂಡವು ಪಂಜಾಬ್ ಕಿಂಗ್ಸ್ ತಂಡಕ್ಕೆ 144 ರನ್‌ಗಳ ಗುರಿ ನೀಡಿದೆ.
ಮುಂಬೈನ ಡಿ.ವೈ. ಪಾಟೀಲ್ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಭಾಗವಾಗಿ ನಡೆಯುತ್ತಿರುವ 48ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು 8 ವಿಕೆಟ್ ನಷ್ಟಕ್ಕೆ 143 ರನ್ ಗಳಿಸಿದೆ. ತಂಡದ ಪರ 65 ರನ್ ಹಾಗೂ ವೃದ್ಧಿಮಾನ್ ಸಹಾ 21 ರನ್ ಗಳಿಸಿದರು. ಉಳಿದಂತೆ ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ, ಡೇವಿಡ್ ಮಿಲ್ಲರ್, ರಾಹುಲ್ ತೇವಾಟಿಯಾ ಬ್ಯಾಟಿಂಗ್ ವೈಫಲ್ಯ ತೋರಿದರು.
ಇನ್ನು ಪಂಜಾಬ್ ಪರ ಕಗಿಸೊ ರಬಾಡ 4 ವಿಕೆಟ್ ಇತ್ತು ಮಿಂಚಿದರೆ, ಅರ್ಷದೀಪ್ ಸಿಂಗ್, ರಿಷಿ ಧವನ್ ಹಾಗೂ ಲಿಯಾಮ್ ಲಿವಿಂಗ್ಸ್ಟೋನ್ ತಲಾ 1 ವಿಕೆಟ್ ಪಡೆದುಕೊಂಡರು.
PublicNext
03/05/2022 09:36 pm