ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ 2022ನೇ ಸಾಲಿನ ಟೂರ್ನಿಯಲ್ಲಿ 117 ಮೀಟರ್ ದೂರ ಸಿಕ್ಸರ್ ಬಾರಿಸುವ ಮೂಲಕ ಪಂಜಾಬ್ ಕಿಂಗ್ಸ್ ಬ್ಯಾಟರ್ ಲಿಯಾಮ್ ಲಿವಿಂಗ್‌ಸ್ಟೋನ್ ಅಬ್ಬರಿಸಿದ್ದಾರೆ. ಇದು ಪ್ರಸಕ್ತ ಸಾಲಿನ ಐಪಿಎಲ್‌ನ ಅತಿ ದೊಡ್ಡ ಸಿಕ್ಸರ್ ಆಗಿದೆ.
ಐಪಿಎಲ್2022 ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ ಆಡುತ್ತಿರುವ ಲಿವಿಂಗ್‌ಸ್ಟೋನ್, ಮಂಗಳವಾರ ಗುಜರಾತ್ ಟೈಟನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆಕ್ರಮಣಕಾರಿ ಬ್ಯಾಟಿಂಗ್ ಮಾಡುವ ಮೂಲಕ ಗಮನ ಸೆಳೆದರು. ಕೇವಲ 10 ಎಸೆತಗಳನ್ನು ಎದುರಿಸಿದ ಲಿವಿಂಗ್‌ಸ್ಟೋನ್ ಅಜೇಯ 30 ರನ್ ಗಳಿಸಿದರು. ಈ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟರು.
ಲಿವಿಂಗ್‌ಸ್ಟೋನ್ 117 ಮೀಟರ್ ದೂರದ ಸಿಕ್ಸರ್ ಸಿಡಿಸಿದ್ದನ್ನು ಕಂಡ ಆಟಗಾರರು, ಪ್ರೇಕ್ಷಕರು ತಬ್ಬಿಬ್ಬಾದರು.
PublicNext
04/05/2022 05:04 pm