ಡೇವಿಡ್ ವಾರ್ನರ್ (92) ಹಾಗೂ ಪೊವೆಲ್ (67) ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ಗೆಲುವಿಗೆ ಡೆಲ್ಲಿ ಕ್ಯಾಪಿಟಲ್ಸ್ 207 ರನ್ ಗಳ ಗುರಿ ನೀಡಿತ್ತು. 208 ರನ್ ಗಳ ಚೇಸಿಂಗ್ ನಲ್ಲಿ ಹಿನ್ನಡೆ ಕಂಡ ಸನ್ ರೈಸರ್ಸ್ ಹೈದರಾಬಾದ್ (SRH) 21 ರನ್ ಗಳ ಸೋಲು ಕಂಡಿತು.
ಬ್ರಬೋರ್ನ್ ಸ್ಟೇಡಿಯಂನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡ ಅಬ್ಬರದ ಆಟವಾಡುವ ಮೂಲಕ ಗಮನಸೆಳೆಯಿತು. 20 ಓವರ್ ಗೆ 3 ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿತ್ತು.
PublicNext
05/05/2022 11:48 pm