ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟಿ-20 ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಪರ ನಾಯಕ ರೋಹಿತ್ ಶರ್ಮಾ ಸ್ಮರಣೀಯ ಸಾಧನೆ ಮಾಡಿದ್ದಾರೆ.
ಐಪಿಎಲ್ 2022 ಟೂರ್ನಿಯ ಭಾಗವಾಗಿ ಇಂದು ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ವಿಶೇಷ ಸಾಧನೆ ಮಾಡಿದ್ದಾರೆ. ಮುಂಬೈ ಪರ ರೋಹಿತ್ ಶರ್ಮಾ 200 ಸಿಕ್ಸರ್‌ಗಳ ಸಾಧನೆ ಮಾಡಿದ್ದಾರೆ.
ರೋಹಿತ್ ಶರ್ಮಾ ಐಪಿಎಲ್‌ನಲ್ಲಿ ಒಟ್ಟು 236 ಸಿಕ್ಸರ್ ಸಿಡಿಸಿದ್ದಾರೆ. ಈ ಪೈಕಿ ಮುಂಬೈ ಪರ ಸಿಕ್ಸರ್‌ಗಳ ದ್ವಿಶತಕ ಗಳಿಸಿದ್ದಾರೆ. ಗುಜರಾತ್ ವಿರುದ್ಧದ ಪಂದ್ಯದಲ್ಲಿ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದ ರೋಹಿತ್, 28 ಎಸೆತಗಳಲ್ಲಿ ಐದು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ 43 ರನ್ ಗಳಿಸಿದರು.
PublicNext
06/05/2022 09:18 pm