ಮುಂಬೈ: ಜಾನಿ ಬೈರ್‌ಸ್ಟೋವ್ ಅರ್ಧಶತಕ ಹಾಗೂ ಜಿತೇಶ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಸಹಾಯದಿಂದ ಪಂಜಾಬ್ ಕಿಂಗ್ಸ್ ತಂಡವು ರಾಜಸ್ಥಾನ್ ರಾಯಲ್ಸ್‌ಗೆ 190 ರನ್‌ಗಳ ಗುರಿ ನೀಡಿದೆ.
ಮುಂಬೈನ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಭಾಗವಾಗಿ ನಡೆಯುತ್ತಿರುವ 52ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ತಂಡವು 5 ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿದೆ. ತಂಡದ ಪರ ಜಾನಿ ಬೈರ್‌ಸ್ಟೋವ್ 56 ರನ್ (40 ಎಸೆತ), ಜಿತೇಶ್ ಶರ್ಮಾ 38 ರನ್ (18 ಎಸೆತ), ಭಾನುಕಾ ರಾಜಪಕ್ಸೆ 27 ರನ್ ಹಾಗೂ ಲಿಯಾಮ್ ಲಿವಿಂಗ್ಸ್ಟೋನ್ 22 ರನ್ ಗಳಿಸಿದರು. ಇನ್ನು ರಾಜಸ್ಥಾನ್ ಪರ ಯಜುವೇಂದ್ರ ಚಹಾಲ್ 3 ವಿಕೆಟ್ ಕಿತ್ತು ಮಿಂಚಿದರೆ, ಕನ್ನಡಿಗ ಪ್ರಸಿದ್ಧ ಕೃಷ್ಣ ಹಾಗೂ ಆರ್. ಅಶ್ವಿನ್ ತಲಾ ಒಂದು ವಿಕೆಟ್ ಪಡೆದುಕೊಂಡರು.
PublicNext
07/05/2022 05:45 pm