ಮುಂಬೈ: ಕ್ವಿಂಟನ್ ಡಿ ಕಾಕ್ ಅರ್ಧಶತಕ, ದೀಪಕ್ ಹೂಡಾ ಅಬ್ಬರದ ಬ್ಯಾಟಿಂಗ್, ಅವೇಶ್ ಖಾನ್ ಹಾಗೂ ಜೇಸನ್ ಹೋಲ್ಡರ್ ಬೌಲಿಂಗ್ ಸಹಾಯದಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 75 ರನ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.
ಪುಣೆ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಭಾಗವಾಗಿ ನಡೆದ 53ನೇ ಪಂದ್ಯದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ತಂಡವು 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತ್ತು.
ಬಳಿಕ ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡವು 14.3 ಓವರ್‌ಗಳಲ್ಲಿ ಎಲ್ಲಾ 10 ವಿಕೆಟ್ ನಷ್ಟಕ್ಕೆ 101 ರನ್ ಗಳಿಸಿ ಸೋಲು ಒಪ್ಪಿಕೊಂಡಿತು. ತಂಡದ ಪರ ಆಂಡ್ರೆ ರಸೆಲ್ ಏಕಾಂಗಿ ಹೋರಾಟ ನಡೆಸಿದರು. ಅವರು 19 ಎಸೆತಗಳಲ್ಲಿ 3 ಬೌಂಡರಿ, 5 ಸಿಕ್ಸರ್ ಸೇರಿ 45 ರನ್ ಗಳಿಸಿದರು. ಉಳಿದಂತೆ ಪ್ರಮುಖ ಬ್ಯಾಟರ್‌ಗಳು ಬ್ಯಾಟಿಂಗ್ ವೈಫಲ್ಯ ತೋರಿದರು. ಇನ್ನು ಲಕ್ನೋ ಪರ ಅವೇಶ್ ಖಾನ್, ಜೇಸನ್ ಹೋಲ್ಡರ್ ತಲಾ 3 ವಿಕೆಟ್ ಕಿತ್ತು ಮಿಂಚಿದರೆ, ಮೊಹ್ಸಿನ್ ಖಾನ್, ದುಷ್ಮಂತ ಚಮೀರಾ, ರವಿ ಬಿಷ್ಣೋಯ್ ತಲಾ ಒಂದು ವಿಕೆಟ್ ಪಡೆದುಕೊಂಡು ತಂಡದ ಗೆಲುವಿಗೆ ಕೊಡುಗೆ ನೀಡಿದರು.
ಇದಕ್ಕೂ ಮುನ್ನ ಲಕ್ನೋ ಪರ ಕ್ವಿಂಟನ್ ಡಿ ಕಾಕ್ 50 ರನ್ (29 ಎಸೆತ), ದೀಪಕ್ ಹೂಡಾ 41 ರನ್ (27 ಎಸೆತ), ಮಾರ್ಕಸ್ ಸ್ಟೊಯಿನಿಸ್ 28 ರನ್ (14 ಎಸೆತ), ಕೃನಾಲ್ ಪಾಂಡ್ಯ 25 ರನ್ ಗಳಿಸಿದ್ದರು. ಇನ್ನು ಕೆಕೆಆರ್ ಪರ ಆಂಡ್ರೆ ರಸೆಲ್ 2 ವಿಕೆಟ್ ಪಡೆದುಕೊಂಡರೆ, ಸುನಿಲ್ ನರೈನ್, ಶಿವಂ ಮಾವಿ ಹಾಗೂ ಟಿಮ್ ಸೌಥಿ ತಲಾ 1 ವಿಕೆಟ್ ಉರುಳಿಸಿದ್ದರು.
PublicNext
07/05/2022 10:58 pm