ಮುಂಬೈ: ಐಪಿಎಲ್ 2022 ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟರ್ ವಿರಾಟ್ ಕೊಹ್ಲಿ ಮೂರನೇ ಬಾರಿಗೆ ಮೊದಲ ಎಸೆತದಲ್ಲೇ ಶೂನ್ಯಕ್ಕೆ ಔಟ್ (ಗೋಲ್ಡನ್ ಡಕ್) ಆಗಿದ್ದಾರೆ.
ಮುಂಬೈನ ವಾಂಖೆಡೆ ಕ್ರಿಕೆಟ್ ಸ್ರೇಡಿಯಂನಲ್ಲಿ ಐಪಿಎಲ್ 2022ರ ಭಾಗವಾಗಿ ಇಂದು ನಡೆಯುತ್ತಿರುವ 54ನೇ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ತಂಡದ ನಾಯಕ ಫಾಪ್ ಡು ಪ್ಲೆಸ್ಸಿಸ್ ಬ್ಯಾಟಿಂಗ್ ಆಯ್ದುಕೊಂಡರು. ಪಂದ್ಯದಲ್ಲಿ ಇನ್ನಿಂಗ್ಸ್ ಆರಂಭಿಸಿದ್ದ ವಿರಾಟ್ ಕೊಹ್ಲಿ, ಜಗದೀಶ ಸುಚಿತ್ ಅವರ ಮೊದಲ ಎಸೆತದಲ್ಲೇ ಕೇನ್ ವಿಲಿಯಮ್ಸನ್‌ಗೆ ಕ್ಯಾಚ್ ನೀಡಿ ಪೆವಿಲಿಯನ್‌ಗೆ ಮರಳಿದರು.
ಈ ಮೂಲಕ ಮಗದೊಮ್ಮೆ ವೈಫಲ್ಯ ಅನುಭವಿಸಿದರು. ಏಪ್ರಿಲ್ 23ರಂದು ಹೈದರಾಬಾದ್ ವಿರುದ್ಧವೇ ನಡೆದ ಪಂದ್ಯದಲ್ಲಿ ಕೊಹ್ಲಿ ಗೋಲ್ಡನ್ ಡಕ್ ಔಟ್ ಆಗಿದ್ದರು. ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧವೂ ಖಾತೆ ತೆರೆಯುವಲ್ಲಿ ವಿಫಲರಾಗಿದ್ದರು.
ಇದಕ್ಕೂ ಮುನ್ನ 2008ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ, 2014 ಪಂಜಾಬ್ ಕಿಂಗ್ಸ್ ವಿರುದ್ಧ ಹಾಗೂ 2017ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಗೋಲ್ಡನ್ ಡಕ್ ಔಟ್ ಆಗಿದ್ದರು. ಈ ಮೂಲಕ ವಿರಾಟ್ ಕೊಹ್ಲಿ ಒಟ್ಟಾರೆಯಾಗಿ ಐಪಿಎಲ್‌ನಲ್ಲಿ ಒಟ್ಟು ಆರನೇ ಬಾರಿಗೆ ಗೋಲ್ಡನ್ ಡಕ್ ಔಟ್ ಆಗಿದ್ದಾರೆ.
PublicNext
08/05/2022 04:20 pm