ಮುಂಬೈ: ನಾಯಕ ಫಾಫ್ ಡು ಪ್ಲೆಸ್ಸಿಸ್ ಸಮಯೋಚಿತ ಅರ್ಧಶತಕ, ರಜತ್ ಪಟಿದಾರ್, ಅಬ್ಬರದ ಸಹಾಯದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ 193 ರನ್‌ಗಳ ಗುರಿ ನೀಡಿದೆ.
ಮುಂಬೈನ ವಾಂಖೆಡೆ ಕ್ರಿಕೆಟ್ ಸ್ರೇಡಿಯಂನಲ್ಲಿ ಐಪಿಎಲ್ 2022ರ ಭಾಗವಾಗಿ ಇಂದು ನಡೆಯುತ್ತಿರುವ 54ನೇ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ತಂಡದ ನಾಯಕ ಫಾಪ್ ಡು ಪ್ಲೆಸ್ಸಿಸ್ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಬ್ಯಾಟಿಂಗ್ ಮಾಡಿದ ಆರ್‌ಸಿಬಿ 3 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿದೆ.
ಆರ್‌ಸಿಬಿ ಪರ ನಾಯಕ ಫಾಫ್ ಡು ಪ್ಲೆಸ್ಸಿಸ್ ಅಜೇಯ 73 ರನ್, ರಜತ್ ಪಟಿದಾರ್48 ರನ್, ಗ್ಲೇನ್ ಮ್ಯಾಕ್ಸ್‌ವೆಲ್ 33 ರನ್ ಹಾಗೂ ಕೊನೆಯಲ್ಲಿ ದಿನೇಶ್ ಕಾರ್ತಿಕ್ 8 ಎಸೆತಗಳಲ್ಲಿ 30 ರನ್ ಚಚ್ಚಿದರು.
PublicNext
08/05/2022 05:32 pm