ಮುಂಬೈ: ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಮಿಂಚಿನ ಪ್ರದರ್ಶನ ನೀಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 67 ರನ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.
ಮುಂಬೈನ ವಾಂಖೆಡೆ ಕ್ರಿಕೆಟ್ ಸ್ರೇಡಿಯಂನಲ್ಲಿ ಐಪಿಎಲ್ 2022ರ ಭಾಗವಾಗಿ ಇಂದು ನಡೆಯುತ್ತಿರುವ 54ನೇ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ತಂಡದ ನಾಯಕ ಫಾಪ್ ಡು ಪ್ಲೆಸ್ಸಿಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಬ್ಯಾಟಿಂಗ್ ಮಾಡಿದ ಆರ್‌ಸಿಬಿ 3 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿತ್ತು.
ಬಳಿಕ ಬ್ಯಾಟಿಂಗ್ ಮಾಡಿದ ಹೈದರಾಬಾದ್ ತಂಡವು 19.2 ಓವರ್‌ಗಳಲ್ಲಿ ಎಲ್ಲಾ 10 ವಿಕೆಟ್ ನಷ್ಟಕ್ಕೆ 125 ರನ್ ಗಳಿಸಿ ಸೋಲಿಗೆ ಗುರಿಯಾಯಿತು. ತಂಡದ ಪರ ರಾಹುಲ್ ತ್ರಿಪಾಠಿ 58 ರನ್, ಆ್ಯಡಂ ಮಕ್ರಮ್ 21 ಗಳಿಸಿದರು. ಇನ್ನು ಆರ್‌ಸಿಬಿ ಪರ ವನಿಂದು ಹಸರಂಗ 5 ವಿಕೆಟ್ ಕಿತ್ತು ಮಿಂಚಿದರೆ, ಜೋಶ್ ಹ್ಯಾಝಲ್‌ವುಡ್ 2 ವಿಕೆಟ್, ಗ್ಲೇನ್ ಮ್ಯಾಕ್ಸ್‌ವೆಲ್ ಹಾಗೂ ಹರ್ಷಲ್ ಪಟೇಲ್ ತಲಾ ಪಡೆದುಕೊಂಡರು.
ಇದಕ್ಕೂ ಮುನ್ನ ಆರ್‌ಸಿಬಿ ಪರ ನಾಯಕ ಫಾಫ್ ಡು ಪ್ಲೆಸ್ಸಿಸ್ ಅಜೇಯ 73 ರನ್, ರಜತ್ ಪಟಿದಾರ್48 ರನ್, ಗ್ಲೇನ್ ಮ್ಯಾಕ್ಸ್‌ವೆಲ್ 33 ರನ್ ಹಾಗೂ ಕೊನೆಯಲ್ಲಿ ದಿನೇಶ್ ಕಾರ್ತಿಕ್ 8 ಎಸೆತಗಳಲ್ಲಿ 30 ರನ್ ಚಚ್ಚಿದ್ದರು.
PublicNext
08/05/2022 07:46 pm