ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 91 ರನ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಅಂಕಪಟ್ಟಿಯಲ್ಲಿ ಒಂದು ಸ್ಥಾನ ಏರಿಕೆ ಕಂಡಿದೆ. ಚೆನ್ನೈ ತಂಡವು ಈವರೆಗೂ 11 ಪಂದ್ಯಗಳನ್ನು ಆಡಿದ್ದು, ಈ ಪೈಕಿ 4ರಲ್ಲಿ ಗೆದ್ದರೆ 7 ಪಂದ್ಯಗಳಲ್ಲಿ ಸೋಲು ಕಂಡಿದೆ. ಇದರೊಂದಿಗೆ +0.028 ನೆಟ್ ರನ್ ರೇಟ್ ಪಡೆದು 8 ಅಂಕಗಳೊಂದಿಗೆ 8ನೇ ಸ್ಥಾನಕ್ಕೇರಿದೆ. ಇತ್ತ 8 ಅಂಕ ಗಳಿಸಿದ್ದರೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ನೆಟ್ ರನ್ ರೇಟ್ (-0.304) ಕಡಿಮೆ ಹೊಂದಿರುವುದರಿಂದ 9ನೇ ಸ್ಥಾನಕ್ಕೆ ಕುಸಿತ ಕಂಡಿದೆ.
PublicNext
09/05/2022 09:53 am