ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IPL 2022: KKR vs MI: ಮುಂಬೈ ವಿರುದ್ಧ KKR ಗೆ ಭರ್ಜರಿ ಜಯ

ಮುಂಬೈ: ಐಪಿಎಲ್ 15 ನೇ ಅವೃತ್ತಿಯಲ್ಲಿ ಇಂದು ಮುಂಬೈ ಇಂಡಿಯನ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ 52 ರನಗ ಗಳ ಭರ್ಜರಿ ಜಯಗಳಿಸಿದೆ. ಮುಂಬೈನ ಡಿ.ವೈ. ಪಾಟೀಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 56ನೇ ಪಂದ್ಯದಲ್ಲಿ ಕೆಕೆಆರ್ ತಂಡವು ಮೊದಲು ಬ್ಯಾಟಿಂಗ್ ಮಾಡಿತ್ತು. ಇನ್ನು ಕೆಕೆಆರ್ ನೀಡಿದ್ದ 166 ರನ್ ಗಳ ಗುರಿ ಬೆನ್ನಟ್ಟಿದ ಮುಂಬೈ 17.3 ಓವರ್ ನಲ್ಲಿ ಎಲ್ಲಾ ವೀಕೆಟ್ ಕಳೆದುಕೊಂಡು ಸೋಲಿಗೆ ಶರಣಾಗಿದೆ.

ಹೌದು 166 ರನ್ ಟಾರ್ಗೆಟ್ ಪಡೆದ ಮುಂಬೈ ಇಂಡಿಯನ್ಸ್ ಆರಂಭದಲ್ಲೇ ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ನಾಯಕ ರೋಹಿತ್ ಶರ್ಮಾ ಕೇವಲ 2 ರನ್ ಸಿಡಿಸಿ ಔಟಾದರು. ಇತ್ತ ತಿಲಕ್ ವರ್ಮಾ 6 ರನ್ ಸಿಡಿಸಿ ನಿರ್ಗಮಿಸಿದರು. 32 ರನ್ಗೆ ಮುಂಬೈ ಇಂಡಿಯನ್ಸ್ 2 ವಿಕೆಟ್ ಪತನಗೊಂಡಿತು.

ಇಶಾನ್ ಕಿಶನ್ ಹೋರಾಟದಿಂದ ಮುಂಬೈ ಇಂಡಿಯನ್ಸ್ ಚೇತರಿಸಿಕೊಂಡಿತು. ಆದರೆ ರಮನದೀಪ್ ಸಿಂಗ್ ಹಾಗೂ ಟಿಮ್ ಡೇವಿಡ್ ಅಬ್ಬರಿಸಲಿಲ್ಲ. ರಮನದೀಪ್ 12 ರನ್ ಗಳಿಸಿ ನಿರ್ಗಮಿಸಿದರು. ಟಿಮ್ ಡೇವಿಡ್ 13 ರನ್ ಸಿಡಿಸಿ ಔಟಾದರು. ಕೀರನ್ ಪೋಲಾರ್ಡ್ ಕೇವಲ 15 ರನ್ ಸಿಡಿಸಿ ಮತ್ತೆ ನಿರಾಸೆ ಮೂಡಿಸಿದರು.

17.3 ಓವರ್ ಗಳಲ್ಲಿ ಮುಂಬೈ ಇಂಡಿಯನ್ಸ್ 113 ರನ್ ಗೆ ಆಲೌಟ್ ಆಯಿತು. ಈ ಮೂಲಕ ಕೆಕೆಆರ್ 52 ರನ್ ಗೆಲುವು ದಾಖಿಸಿತು.

Edited By : Nirmala Aralikatti
PublicNext

PublicNext

09/05/2022 11:47 pm

Cinque Terre

32.16 K

Cinque Terre

0