ಮುಂಬೈ: ಮಿಚೆಲ್ ಮಾರ್ಷ್ ಅದ್ಭುತ ಆಲ್‌ರೌಂಡರ್ ಪ್ರದರ್ಶನ, ಡೇವಿಡ್ ವಾರ್ನರ್ ಅರ್ಧಶತಕದ ಸಹಾಯದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ 8 ವಿಕೆಟ್ ಗಳಿಂದ ಗೆದ್ದು ಬೀಗಿದೆ.
ಮುಂಬೈನ ಡಿ.ವೈ.ಪಾಟೀಲ್ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಭಾಗವಾಗಿ ನಡೆದ 58ನೇ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ತಂಡವು 6 ವಿಕೆಟ್ ನಷ್ಟಕ್ಕೆ 160 ರನ್ ಗಳಿಸಿತ್ತು.
ಬಳಿಕ ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡವು 11 ಎಸೆತಗಳು ಬಾಕಿ ಇರುವಂತೆ 2 ವಿಕೆಟ್ ನಷ್ಟಕ್ಕೆ 161 ರನ್ ಚಚ್ಚಿ ಗೆದ್ದು ಬೀಗಿದೆ. ತಂಡದ ಪರ ಮಿಚೆಲ್ ಮಾರ್ಷ್ 89 ರನ್, ಡೇವಿಡ್ ವಾರ್ನರ್ ಅಜೇಯ 50 ರನ್ ಹಾಗೂ ನಾಯಕ ರಿಷಭ್ ಪಂತ್ ಅಜೇಯ 13 ರನ್ ಗಳಿಸಿದರು.
ಇದಕ್ಕೂ ಮುನ್ನ ರಾಜಸ್ಥಾನ್ ಪರ ಆರ್.ಅಶ್ವಿನ್ 50 ರನ್, ದೇವದತ್ ಪಡಿಕ್ಕಲ್ 48 ರನ್ ಹಾಗೂ ಯಶಸ್ವಿ ಜೈಸ್ವಾಲ್ 19 ರನ್ ಗಳಿಸಿದ್ದರು. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಪರ ಚೇತನ್ ಸಕರಿಯಾ, ಆನ್ರಿಚ್ ನಾರ್ಟ್ಜೆ ಹಾಗೂ ಮಿಚೆಲ್ ಮಾರ್ಷ್ ತಲಾ 2 ವಿಕೆಟ್ ಪಡೆದುಕೊಂಡಿದ್ದರು.
PublicNext
11/05/2022 11:30 pm