ಮುಂಬೈ: ವೃದ್ಧಿಮಾನ ಸಹಾ ಏಕಾಂಗಿ ಹೋರಾಟದ ಅರ್ಧಶತಕದ ಸಹಾಯದಿಂದ ಗುಜರಾತ್ ಟೈಟಾನ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 7 ವಿಕೆಟ್‌ಗಳಿಂದ ಗೆದ್ದು ಬೀಗಿದೆ.
ಮುಂಬೈನ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಭಾಗವಾಗಿ ನಡೆಯುತ್ತಿರುವ 62ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಚೆನ್ನೈ ತಂಡವು 5 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿತ್ತು. ಬಳಿಕ ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು 5 ಎಸೆತಗಳು ಬಾಕಿ ಇರುವಂತೆ 3 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಿ ಜಯ ಸಾಧಿಸಿದೆ.
ಗುಜರಾತ್ ಟೈಟಾನ್ಸ್ ಪರ ವೃದ್ಧಿಮಾನ ಸಹಾ ಅಜೇಯ 67 ರನ್, ಮ್ಯಾಥ್ಯೂ ವೇಡ್ 20 ರನ್ ಹಾಗೂ ಡೇವಿಡ್ ಮಿಲ್ಲರ್ ಅಜೇಯ 15 ರನ್ ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ಇದಕ್ಕೂ ಮುನ್ನ ಚೆನ್ನೈ ಪರ ಋತುರಾತ್ ಗಾಯಕ್ವಾಡ್ 53 ರನ್, ನಾರಾಯಣ ಜಗದೀಶ ಅಜೇಯ 39 ರನ್ ಗಳಿಸಿದ್ದರು.
ಇನ್ನು ಗುಜರಾತ್ ಟೈಟಾನ್ಸ್ ಪರ ಮೊಹಮ್ಮದ್ ಶಮಿ 2 ವಿಕೆಟ್, ರಶೀದ್ ಖಾನ್, ಅಲ್ಜಾರಿ ಜೋಸೆಫ್ ಹಾಗೂ ರವಿಶ್ರೀನಿವಾಸನ್ ಸಾಯಿ ಕಿಶೋರ್ ತಲಾ 1 ವಿಕೆಟ್ ಪಡೆದುಕೊಂಡಿದ್ದರು.
PublicNext
15/05/2022 07:14 pm