ಮುಂಬೈ: ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್ ಸಮಯೋಚಿತ ಬ್ಯಾಟಿಂಗ್ ಸಹಾಯದಿಂದ ರಾಜಸ್ಥಾನ್ ರಾಯಲ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್‌ಗೆ 179 ರನ್‌ಗಳ ಸವಾಲು ಒಡ್ಡಿದೆ.
ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಭಾಗವಾಗಿ ನಡೆಯುತ್ತಿರುವ 63ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ತಂಡವು 6 ವಿಕೆಟ್ ನಷ್ಟಕ್ಕೆ 178 ರನ್ ಗಳಿಸಿದೆ. ತಂಡದ ಪರ ಯಶಸ್ವಿ ಜೈಸ್ವಾಲ್ 41 ರನ್, ದೇವದತ್ ಪಡಿಕ್ಕಲ್ 39 ರನ್ ಹಾಗೂ ನಾಯಕ ಸಂಜು ಸ್ಯಾಮ್ಸನ್ 32 ರನ್ ಗಳಿಸಿದರು. ಇನ್ನು ರವಿ ಬಿಷ್ಣೋಯಿ 2 ವಿಕೆಟ್ ಕಿತ್ತು ಮಿಂಚಿದರೆ, ಜೇಸನ್ ಹೋಲ್ಡರ್, ಅವೇಶ್ ಖಾನ್ ಹಾಗೂ ಆಯುಷ್ ಬಡೋನಿ ತಲಾ 1 ವಿಕೆಟ್ ಪಡೆದುಕೊಂಡರು.
PublicNext
15/05/2022 09:38 pm