ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಥಾಮಸ್ ಕಪ್ ಚಾಂಪಿಯನ್ಸ್​ಗೆ ಮೋದಿ ಅಭಿನಂದನೆ- 1 ಕೋಟಿ ರೂ. ಬಹುಮಾನ ಘೋಷಣೆ

ನವದೆಹಲಿ: ಮೊದಲ ಬಾರಿಗೆ ಥಾಮಸ್ ಕಪ್ ಪ್ರಶಸ್ತಿಯನ್ನು ಗೆದ್ದು ಇತಿಹಾಸ ನಿರ್ಮಿಸಿದ ಭಾರತೀಯ ಪುರುಷರ ಬ್ಯಾಡ್ಮಿಂಟನ್ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಬ್ಯಾಂಕಾಕ್‌ನಲ್ಲಿ 14 ಬಾರಿಯ ಚಾಂಪಿಯನ್ ಇಂಡೋನೇಷ್ಯಾವನ್ನು 3-0 ಅಂತರದಿಂದ ಮಣಿಸಿದ ಟೀಮ್ ಇಂಡಿಯಾ ಚೊಚ್ಚಲ ಚಿನ್ನದ ಪದಕಕ್ಕೆ ಮುತ್ತಿಕ್ಕುವ ಮೂಲಕ ಇತಿಹಾಸ ಸೃಷ್ಟಿಸಿದೆ. ಪ್ರಧಾನಿ ಮೋದಿ ಅವರು ಆಟಗಾರರೊಂದಿಗೆ ವೈಯಕ್ತಿಕವಾಗಿ ಫೋನ್​ ಕರೆಯಲ್ಲಿ ಮಾತನಾಡಿದರು.

ಥಾಮಸ್ ಕಪ್ ಗೆದ್ದು 135 ಕೋಟಿ ಭಾರತೀಯರು ಹೆಮ್ಮೆ ಪಡುವಂತೆ ಮಾಡಿದ ನಮ್ಮ ಬ್ಯಾಡ್ಮಿಂಟನ್ ಚಾಂಪಿಯನ್‌ಗಳೊಂದಿಗೆ ವಿಶೇಷ ಸಂವಾದ ಎಂದು ಮೋದಿ ವಿಡಿಯೋದೊಂದಿಗೆ ಟ್ವೀಟ್​ ಮಾಡಿದ್ದಾರೆ.

Edited By : Vijay Kumar
PublicNext

PublicNext

15/05/2022 11:17 pm

Cinque Terre

70.09 K

Cinque Terre

9