ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವಿಶೇಷ ಪ್ರಶಸ್ತಿ ಪರಿಚಯ ಮಾಡಿದೆ. ತಂಡದ ಪರ ಅತಿ ಹೆಚ್ಚು ವರ್ಷಗಳ ಕಾಲ ಆಟವಾಡಿರುವ ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ ಹಾಗೂ ಕೆರಿಬಿಯನ್ ದೈತ್ಯ ಕ್ರಿಸ್ ಗೇಲ್ ಅವರು ಚೊಚ್ಚಲ ಪ್ರಶಸ್ತಿ ಗೌರವಕ್ಕೆ ಭಾಜನರಾಗಿದ್ದಾರೆ. 'ಹಾಲ್ ಆಫ್ ಫೇಮ್' ಎಂಬ ಹೆಸರಿನಲ್ಲಿ ಪ್ರಶಸ್ತಿ ಪರಿಚಯ ಮಾಡಿರುವ ಆರ್‌ಸಿಬಿ, ಖಾಸಗಿ ಹೋಟೆಲ್ನಲ್ಲಿ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ದಿಗ್ಗಜ ಆಟಗಾರರೊಂದಿಗೆ ಸಂವಾದ ಸಹ ನಡೆಸಿದರು.
ಮುಂದಿನ ವರ್ಷ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಎಬಿ ಡಿವಿಲಿಯರ್ಸ್ ಹಾಗೂ ಕ್ರಿಸ್ ಗೇಲ್ ಅವರನ್ನು ಈ ಪ್ರಶಸ್ತಿ ಮೂಲಕ ಗೌರವಿಸಲಾಗುತ್ತದೆ.
ಹಾಲ್ ಆಫ್ ಫೇಮ್‌ಗೆ ಸೇರ್ಪಡೆಗೊಳ್ಳಲು ಕೆಲವು ಷರತ್ತುಗಳಿವೆ. ಇದರಲ್ಲಿ ಆಟಗಾರ ಕನಿಷ್ಠ 3 ವರ್ಷಗಳ ಕಾಲ ಆರ್‌ಸಿಬಿ ಪರ ಆಡಿರಬೇಕು. ಪ್ರಸ್ತುತ, ಅವರು ಐಪಿಎಲ್‌ನ ಭಾಗವಾಗಿರಬಾರದು. ಮೈದಾನದಲ್ಲಿ ಮತ್ತು ಹೊರಗೆ ಆರ್‌ಸಿಬಿ ಮೇಲೆ ಗಮನಾರ್ಹ ಪರಿಣಾಮ ಬೀರಬೇಕು. ಇಂತಹ ಸರ್ವ ಶ್ರೇಷ್ಠ ಆಟಗಾರರಿಗೆ ಮಾತ್ರ ಆರ್‌ಸಿಬಿ ಹಾಲ್ ಆಫ್ ಫೇಮ್ ಗೌರವ ನೀಡಲಿದೆ.
PublicNext
17/05/2022 03:45 pm