ಮುಂಬೈ: ಕ್ವಿಂಟನ್ ಡಿ ಕಾಕ್ ಶತಕ, ನಾಯಕ ಕೆ.ಎಲ್.ರಾಹುಲ್ ಅರ್ಧಶತಕದ ಸಹಾಯದಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ 211 ರನ್‌ಗಳ ಬೃಹತ್ ಮೊತ್ತದ ರನ್‌ಗಳ ಗುರಿ ನೀಡಿದೆ.
ಮುಂಬೈನ ಡಿ.ವೈ.ಪಾಟೀಲ್ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಭಾಗವಾಗಿ ನಡೆಯುತ್ತಿರುವ 66ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ತಂಡವು ಯಾವುದೇ ವಿಕೆಟ್ ನಷ್ಟವಿಲ್ಲದೆ 210 ರನ್ ಬಾರಿಸಿದೆ. ತಂಡದ ಪರ ಕ್ವಿಂಟನ್ ಡಿ ಕಾಕ್ 140 ರನ್ (70 ಎಸೆತ, 10 ಬೌಂಡರಿ, 10 ಸಿಕ್ಸರ್), ಕೆ.ಎಲ್.ರಾಹುಲ್ 68 ರನ್ (51 ಎಸೆತ, 3 ಬೌಂಡರಿ, 4 ಸಿಕ್ಸರ್) ಬಾರಿಸಿದರು.
PublicNext
18/05/2022 09:27 pm