ಮುಂಬೈ: ನಾಯಕ ಹಾರ್ದಿಕ್ ಪಾಂಡ್ಯ ಸಮಯೋಚಿತ ಅರ್ಧಶತಕದ ಸಹಾಯದಿಂದ ಗುಜರಾತ್ ಟೈಟಾನ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 169 ರನ್‌ಗಳ ಗುರಿ ನೀಡಿದೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಭಾಗವಾಗಿ ನಡೆಯುತ್ತಿರುವ 67ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು 5 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿದೆ. ತಂಡದ ಪರ ಹಾರ್ದಿಕ್ ಪಾಂಡ್ಯ ಅಜೇಯ 62 ರನ್, ಡೇವಿಡ್ ಮಿಲ್ಲರ್ 34 ರನ್, ವೃದ್ಧಿಮಾನ್ ಸಹಾ 31 ರನ್ ಹಾಗೂ ರಶೀದ್ ಖಾನ್ 19 ರನ್ ಗಳಿಸಿದರು.
ಇನ್ನು ಆರ್‌ಸಿಬಿ ಪರ ಜೋಶ್ ಹ್ಯಾಜಲ್ವುಡ್ 2 ವಿಕೆಟ್, ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ವನಿಂದು ಹಸರಂಗ ಡಿ ಸಿಲ್ವ ತಲಾ 1 ವಿಕೆಟ್ ಪಡೆದುಕೊಂಡರು.
PublicNext
19/05/2022 09:24 pm