ಮುಂಬೈ: ವಿರಾಟ್ ಕೊಹ್ಲಿ ಅಬ್ಬರದ ಅರ್ಧಶತಕ, ನಾಯಕ ಫಾಫ್ ಡು ಪ್ಲೆಸ್ಸಿಸ್ ಹಾಗೂ ಗ್ಲೇನ್ ಮ್ಯಾಕ್ಸ್ವೆಲ್ ಹೋರಾಟದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ 8 ವಿಕೆಟ್ಗಳಿಂದ ಗೆದ್ದು ಬೀಗಿದೆ. ಈ ಮೂಲಕ ಪ್ಲೇಆಫ್ ಕನಸು ಜೀವಂತವಾಗಿ ಉಳಿದಿದೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಐಪಿಎಲ್ 2022ರ ಭಾಗವಾಗಿ ನಡೆದ 67ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು 5 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿತ್ತು. ಬಳಿಕ ಬ್ಯಾಟಿಂಗ್ ಮಾಡಿದ ಆರ್ಸಿಬಿ 8 ಎಸೆತಗಳು ಬಾಕಿ ಇರುವಂತೆ 2 ವಿಕೆಟ್ ನಷ್ಟಕ್ಕೆ 170 ರನ್ ಗಳಿಸಿ ಗೆದ್ದು ಬೀಗಿದೆ. ತಂಡದ ಪರ ವಿರಾಟ್ ಕೊಹ್ಲಿ 73 ರನ್, ನಾಯಕ ಫಾಫ್ ಡು ಪ್ಲೆಸ್ಸಿಸ್ 44 ರನ್ ಹಾಗೂ ಗ್ಲೇನ್ ಮ್ಯಾಕ್ಸ್ವೆಲ್ ಅಜೇಯ 40 ರನ್ ಗಳಿಸಿದರು.
ಇದಕ್ಕೂ ಮುನ್ನ ತಂಡದ ಪರ ಹಾರ್ದಿಕ್ ಪಾಂಡ್ಯ ಅಜೇಯ 62 ರನ್, ಡೇವಿಡ್ ಮಿಲ್ಲರ್ 34 ರನ್, ವೃದ್ಧಿಮಾನ್ ಸಹಾ 31 ರನ್ ಹಾಗೂ ರಶೀದ್ ಖಾನ್ 19 ರನ್ ಗಳಿಸಿದ್ದರು. ಇನ್ನು ಆರ್ಸಿಬಿ ಪರ ಜೋಶ್ ಹ್ಯಾಜಲ್ವುಡ್ 2 ವಿಕೆಟ್, ಗ್ಲೆನ್ ಮ್ಯಾಕ್ಸ್ವೆಲ್ ಹಾಗೂ ವನಿಂದು ಹಸರಂಗ ಡಿ ಸಿಲ್ವ ತಲಾ 1 ವಿಕೆಟ್ ಪಡೆದುಕೊಂಡಿದ್ದರು.
PublicNext
19/05/2022 11:16 pm