ಮುಂಬೈ: ಯಶಸ್ವಿ ಜೈಸ್ವಾಲ್ ಅರ್ಧಶತಕ, ಆರ್. ಅಶ್ವಿನ್ ಅಬ್ಬರದ ಬ್ಯಾಟಿಂಗ್ ಸಹಾಯದಿಂದ ರಾಜಸ್ಥಾನ್ ರಾಯಲ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 5 ವಿಕೆಟ್‌ಗಳಿಂದ ಗೆಲುವು ದಾಖಲಿಸಿದೆ.
ಐಪಿಎಲ್ 2022ರ ಭಾಗವಾಗಿ ನಡೆದ 68ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ 6 ವಿಕೆಟ್ ನಷ್ಟಕ್ಕೆ150 ರನ್ ಗಳಿಸಿತ್ತು. ಬಳಿಕ ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ತಂಡವು ಯಶಸ್ವಿ ಜೈಸ್ವಾಲ್ (59 ರನ್), ಆರ್. ಅಶ್ವಿನ್ (40 ರನ್) ಸಹಾಯದಿಂದ 5 ವಿಕೆಟ್ ನಷ್ಟಕ್ಕೆ151 ರನ್ ಗಳಿಸಿ ಗೆದ್ದು ಬೀಗಿದೆ.
PublicNext
20/05/2022 11:17 pm