ಬೆಂಗಳೂರು: ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿ ಹಾಗೂ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಟೀಂ ಇಂಡಿಯಾವನ್ನು ಪ್ರಕಟಿಸಿದೆ.
5 ಪಂದ್ಯಗಳ ಟಿ20 ಸರಣಿಯು ಜೂನ್ 9ರಿಂದ ಆರಂಭವಾಗಲಿದ್ದು, ಕನ್ನಡಗ ಕೆ.ಎಲ್.ರಾಹುಲ್ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಹಾಗೆಯೇ ಹಲವು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಯುವ ಆಟಗಾರರಾದ ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್, ವೆಂಕಟೇಶ್ ಅಯ್ಯರ್ ಅವರು ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಟಿ20 ವಿಶ್ವಕಪ್ ಬಳಿಕ ಮೊದಲ ಬಾರಿಗೆ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಜತೆಗೆ ಆರ್‌ಸಿಬಿ ಪರ ಆಡುತ್ತಿರುವ ‘ಗೇಮ್ ಫಿನಿಷರ್’ ದಿನೇಶ್ ಕಾರ್ತಿಕ್ ಅವರು ಎರಡು ವರ್ಷಗಳ ಬಳಿಕ ಟೀಮ್ ಇಂಡಿಯಾಗೆ ಮರಳಿದ್ದಾರೆ.
ಟಿ–20 ತಂಡ: ಕೆ.ಎಲ್.ರಾಹುಲ್ (ನಾಯಕ) ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ರವಿ ಬಿಷ್ಟೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್.
ಇನ್ನು ಜುಲೈನಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಟೆಸ್ಟ್ ಸರಣಿಗೆ ನಾಯಕರಾಗಿ ರೋಹಿತ್ ಶರ್ಮಾ ಮುಂದುವರಿಯಲಿದ್ದಾರೆ.
ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ) ಕೆ.ಎಲ್.ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ್ ಪೂಜಾರ, ರಿಷಭ್ ಪಂತ್, ಕೆ.ಎಸ್.ಭರತ್, ರವೀಂದ್ರ ಜಡೇಜಾ, ಆರ್.ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್‌ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಪ್ರಸಿದ್ಧ ಕೃಷ್ಣ.
PublicNext
22/05/2022 07:26 pm