ಮುಂಬೈ: ಮುಂದಿನ ತಿಂಗಳು ಜೂನ್ 9ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಟೀಂ ಇಂಡಿಯಾವನ್ನು ಪ್ರಕಟಿಸಿದೆ. ಈ ಬಾರಿಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಫಿನಿಶರ್ ಆಗಿ ಬೊಂಬಾಟ್ ಪ್ರದರ್ಶನ ತೋರುತ್ತಿರುವ ದಿನೇಶ್ ಕಾರ್ತಿಕ್ ಮತ್ತೆ ಟೀಂ ಇಂಡಿಯಾಗೆ ಆಯ್ಕೆಯಾಗಿದ್ದಾರೆ. ಬರೋಬ್ಬರಿ ಮೂರು ವರ್ಷಗಳ ನಂತರ ಕಾರ್ತಿಕ್ಗೆ ಮತ್ತೆ ಅಂತರರಾಷ್ಟ್ರೀಯ ಕ್ರಿಕೆಟ್ನ ಬಾಗಿಲು ತೆರೆದಿದ್ದು, ಟ್ವೀಟ್ ಮಾಡಿ ಸಂಭ್ರಮ ಹಂಚಿಕೊಂಡಿದ್ದಾರೆ.
ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಬಿಸಿಸಿಐ ತನ್ನನ್ನು ಆಯ್ಕೆ ಮಾಡುತ್ತಿದ್ದಂತೆ ಟ್ವೀಟ್ ಮಾಡಿರುವ ಕಾರ್ತಿಕ್, "ನೀವು ನಿಮ್ಮನ್ನು ನಂಬಿದರೆ, ಎಲ್ಲವೂ ಸರಿಯಾಗಿ ಸಾಗುತ್ತದೆ. ನಿಮ್ಮೆಲ್ಲರ ಬೆಂಬಲ ಮತ್ತು ನಂಬಿಕೆಗೆ ಧನ್ಯವಾದಗಳು. ಕಠಿಣ ಪರಿಶ್ರಮ ಮುಂದುವರಿಯುತ್ತದೆ" ಎಂದು ಬರೆದುಕೊಂಡಿದ್ದಾರೆ.
ದಿನೇಶ್ ಕಾರ್ತಿಕ್ ಇದ್ದ ತಂಡದಲ್ಲೇ ರಿಷಭ್ ಪಂತ್ ಕೂಡ ಇದ್ದಾರೆ. ಇದರಿಂದ ಕಾರ್ತಿಕ್ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆಯುತ್ತಾರಾ ಎಂಬ ಅನುಮಾನ ಮೂಡಿದೆ. ಎಲ್ಲಾದರೂ ಅವಕಾಶ ಸಿಕ್ಕರೆ ಆ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಂಡರೆ ಟಿ20 ವಿಶ್ವಕಪ್ನಲ್ಲಿ ಸ್ಥಾನ ಪಡೆಯುವುದು ಖಚಿತ.
PublicNext
23/05/2022 09:45 am