ಕೋಲ್ಕತ್ತಾ: ಜೋಸ್ ಬಟ್ಲರ್ ಅರ್ಧಶತಕ, ನಾಯಕ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್ ಸಹಾಯದಿಂದ ರಾಜಸ್ಥಾನ್ ರಾಯಲ್ಸ್ ತಂಡವು ಗುಜರಾತ್ ಟೈಟಾನ್ಸ್ ತಂಡಕ್ಕೆ 189 ರನ್ಗಳ ಗುರಿ ನೀಡಿದೆ.
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಇಂದು ನಡೆಯುತ್ತಿರುವ ಐಪಿಎಲ್ 2022ರ ಕ್ವಾಲಿಫಯರ್ನ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 6 ವಿಕೆಟ್ ನಷ್ಟಕ್ಕೆ 188 ರನ್ ಚಚ್ಚಿದೆ.
ರಾಜಸ್ಥಾನ್ ಪರ ಜೋಸ್ ಬಟ್ಲರ್ 89 ರನ್ ( 56 ಎಸೆತ, 12 ಬೌಂಡರಿ, 2 ಸಿಕ್ಸರ್), ನಾಯಕ ಸಂಜು ಸ್ಯಾಮ್ಸನ್ 47 ರನ್ (26 ಎಸೆತ, 5 ಬೌಂಡರಿ, 3 ಸಿಕ್ಸರ್) ಹಾಗೂ ದೇವದತ್ತ ಪಡಿಕ್ಕಲ್ 28 ರನ್ (20 ಎಸೆತ, 2 ಬೌಂಡರಿ, 2 ಸಿಕ್ಸರ್) ಸಿಡಿಸಿದರು. ಇನ್ನು ಗುಜರಾತ್ ಪರ ಮೊಹಮ್ಮದ್ ಶಮಿ, ಯಶ್ ದಯಾಳ್, ರವಿಶ್ರೀನಿವಾಸನ್ ಸಾಯಿ ಕಿಶೋರ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಒಂದು ವಿಕೆಟ್ ಪಡೆದುಕೊಂಡರು.
PublicNext
24/05/2022 09:28 pm