ಕೋಲ್ಕತ್ತಾ: ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಮಿಂಚಿದ ಗುಜರಾತ್ ಟೈಟಾನ್ಸ್ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ 7 ವಿಕೆಟ್‌ಗಳಿಂದ ಗೆದ್ದು ಬೀಗಿದೆ. ಇದರೊಂದಿಗೆ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ತಂಡವು ಫೈನಲ್‌ಗೆ ಎಂಟ್ರಿಕೊಟ್ಟಿದೆ.
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಇಂದು ನಡೆದ ಐಪಿಎಲ್ 2022ರ ಕ್ವಾಲಿಫಯರ್‌ನ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 6 ವಿಕೆಟ್ ನಷ್ಟಕ್ಕೆ 188 ರನ್ ಚಚ್ಚಿತ್ತು. ಬಳಿಕ ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು 3 ವಿಕೆಟ್ ನಷ್ಟಕ್ಕೆ 191 ರನ್ ಗಳಿಸಿ ಗೆಲುವು ಸಾಧಿಸಿದೆ.
ಗುಜರಾತ್ ಪರ ಶುಭ್ಮನ್ ಗಿಲ್, ಮ್ಯಾಥ್ಯೂ ವೇಡ್ ತಲಾ 35 ರನ್ ಗಳಿಸಿದರೆ, ಡೇವಿಡ್ ಮಿಲ್ಲರ್ 68 ರನ್, ನಾಯಕ ಹಾರ್ದಿಕ್ ಪಾಂಡ್ಯ 40 ರನ್ ಗಳಿಸಿದರು. ಇನ್ನು ರಾಜಸ್ಥಾನ್ ಪರ ಟ್ರೆಂಟ್ ಬೌಲ್ಟ್, ಒಬೆಡ್ ಮೆಕಾಯ್ ತಲಾ ಒಂದು ವಿಕೆಟ್ ಪಡೆದುಕೊಂಡರು.
ಇದಕ್ಕೂ ಮುನ್ನ ರಾಜಸ್ಥಾನ್ ಪರ ಜೋಸ್ ಬಟ್ಲರ್ 89 ರನ್ ( 56 ಎಸೆತ, 12 ಬೌಂಡರಿ, 2 ಸಿಕ್ಸರ್), ನಾಯಕ ಸಂಜು ಸ್ಯಾಮ್ಸನ್ 47 ರನ್ (26 ಎಸೆತ, 5 ಬೌಂಡರಿ, 3 ಸಿಕ್ಸರ್) ಹಾಗೂ ದೇವದತ್ತ ಪಡಿಕ್ಕಲ್ 28 ರನ್ (20 ಎಸೆತ, 2 ಬೌಂಡರಿ, 2 ಸಿಕ್ಸರ್) ಸಿಡಿಸಿದ್ದರು. ಇನ್ನು ಗುಜರಾತ್ ಪರ ಮೊಹಮ್ಮದ್ ಶಮಿ, ಯಶ್ ದಯಾಳ್, ರವಿಶ್ರೀನಿವಾಸನ್ ಸಾಯಿ ಕಿಶೋರ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಒಂದು ವಿಕೆಟ್ ಪಡೆದುಕೊಂಡಿದ್ದರು.
PublicNext
24/05/2022 11:37 pm