ಕೋಲ್ಕತ್ತಾ: ರಜತ್ ಪಟಿದಾರ್ ಸ್ಫೋಟಕ ಶತಕ, ದಿನೇಶ್ ಕಾರ್ತಿಕ್ ಅಬ್ಬರದ ಬ್ಯಾಟಿಂಗ್ ಸಹಾಯದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ 208 ರನ್‌ಗಳ ಗುರಿ ನೀಡಿದೆ.
ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿರುವ ಐಪಿಎಲ್ 2022ರ ಎಲಿಮಿನೇಟರ್ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ತಂಡದ ನಾಯಕ ಕೆ.ಎಲ್. ರಾಹುಲ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ 4. ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿದೆ. ತಂಡದ ಪರ ರಜತ್ ಪಟಿದಾರ್ ಅಜೇಯ 112 ರನ್, ದಿನೇಶ್ ಕಾರ್ತಿಕ್ ಅಜೇಯ 37 ರನ್ ಹಾಗೂ ವಿರಾಟ್ ಕೊಹ್ಲಿ 25 ರನ್ ಗಳಿಸಿದರು.
PublicNext
25/05/2022 10:09 pm