ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IPL 2022: ಕೆ.ಎಲ್ ಹೋರಾಟ ವ್ಯರ್ಥ- ಆರ್ ಸಿಬಿಗೆ ಭರ್ಜರಿ ಗೆಲುವು

ಕೋಲ್ಕತ್ತಾ: ಅದ್ಭುತ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 14 ರನ್‌ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಕ್ವಾಲಿಫಯರ್ 2 ಪಂದ್ಯಕ್ಕೆ ಎಂಟ್ರಿ ಕೊಟ್ಟಿದೆ.

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಐಪಿಎಲ್ 2022ರ ಎಲಿಮಿನೇಟರ್ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ತಂಡದ ನಾಯಕ ಕೆ.ಎಲ್. ರಾಹುಲ್ ಬೌಲಿಂಗ್ ಆಯ್ದುಕೊಂಡಿದ್ದರ. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ 4. ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿತ್ತು.

ಬಳಿಕ ಬ್ಯಾಟಿಂಗ್ ಮಾಡಿದ ಲಕ್ನೋ ತಂಡವು 6 ವಿಕೆಟ್ ನಷ್ಟಕ್ಕೆ 196 ರನ್ ಗಳಿಸಿ ಸೋಲು ಒಪ್ಪಿಕೊಂಡಿತು. ಇದರೊಂದಿಗೆ ಟೂರ್ನಿಯಿಂದ ಹೊರ ಬಿದ್ದಿದೆ. ತಂಡದ ಪರ ಕೆ.ಎಲ್. ರಾಹುಲ್ 79 ರನ್ ಹಾಗೂ ದೀಪಕ್ ಹೂಡ 45 ರನ್ ಗಳಿಸಿದರು.

ಇದಕ್ಕೂ ಮುನ್ನ ಆರ್ ಸಿಬಿ ತಂಡದ ಪರ ರಜತ್ ಪಟಿದಾರ್ ಅಜೇಯ 112 ರನ್, ದಿನೇಶ್ ಕಾರ್ತಿಕ್ ಅಜೇಯ 37 ರನ್ ಹಾಗೂ ವಿರಾಟ್ ಕೊಹ್ಲಿ 25 ರನ್ ಗಳಿಸಿದ್ದರು.

Edited By : Vijay Kumar
PublicNext

PublicNext

26/05/2022 12:26 am

Cinque Terre

100.38 K

Cinque Terre

21

ಸಂಬಂಧಿತ ಸುದ್ದಿ