ಅಹಮದಾಬಾದ್: 6 ವರ್ಷಗಳ ಬಳಿಕ ಪ್ರಶಸ್ತಿ ಸುತ್ತಿಗೇರುವ ಉತ್ಸಾಹದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ
ಐಪಿಎಲ್-15ರ ಆವೃತ್ತಿಯಲ್ಲಿ ಎರಡನೇ ಕ್ವಾಲಿಫೈಯರ್ ಹೋರಾಟದಲ್ಲಿಂದು ಆರ್ ಸಿಬಿ ಮಾಜಿ ಚಾಂಪಿಯನ್ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ.
ನರೇಂದ್ರ ಮೋದಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಆರ್ಸಿಬಿ-ರಾಜಸ್ಥಾನ ನಡುವಿನ ಕದನ ಕ್ರಿಕೆಟ್ ಪ್ರಿಯರ ಕುತೂಹಲ ಕೆರಳಿಸಿದೆ.
ಎಲಿಮಿನೇಟರ್ ಹೋರಾಟದಲ್ಲಿ ಭರ್ಜರಿ ಗೆಲುವಿನ ನಗೆ ಬೀರಿರುವ ಫಾಫ್ ಡು ಪ್ಲೆಸಿಸ್ ಬಳಗ ಗೆಲುವಿನ ಆತ್ಮವಿಶ್ವಾಸದಲ್ಲಿದೆ.
ರಾಜಸ್ಥಾನ ತಂಡ, 2008ರ ಬಳಿಕ ಮೊದಲ ಬಾರಿಗೆ ಫೈನಲ್ ಪ್ರವೇಶಿಸುವ ಅವಕಾಶ ಹೊಂದಿದೆ.
ಆರ್ ಸಿಬಿ: ಹಿಂದಿನ ಪಂದ್ಯದಲ್ಲಿ ಆಡಿದ ತಂಡವೇ ಕಣಕ್ಕಿಳಿಯಲಿದೆ. ಹರ್ಷಲ್ ಪಟೇಲ್ ಪೂರ್ಣ ಫಿಟ್ ಇಲ್ಲದಿದ್ದರೂ, ಮರಳಿ ಕಣಕ್ಕಿಳಿಯುವ ನಿರೀಕ್ಷೆ ಇದೆ.
ರಾಜಸ್ಥಾನ: ಮೊದಲ ಕ್ವಾಲಿಫೈಯರ್ ಪಂದ್ಯದ ಸೋಲಿನ ನಡುವೆಯೂ ಅದೇ ತಂಡವನ್ನು ಉಳಿಸಿಕೊಳ್ಳುವ ಸಾಧ್ಯತೆಗಳಿವೆ.
ಪಂದ್ಯ ಆರಂಭ: ರಾತ್ರಿ 7.30
PublicNext
27/05/2022 07:30 am