ಅಹಮದಾಬಾದ್: ಗುಜರಾತ್‌ನ ಮೊಟೇರಾದ ನರೇಂದ್ರ ಮೋದಿ ಕ್ರಿಕೆಟ್ ಅಂಗಳದಲ್ಲಿ ನಡೆದ ಐಪಿಎಲ್ 2022ರ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ರಾಜಸ್ಥಾನ್ ರಾಯಲ್ಸ್ 7 ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ರಾಜಸ್ಥಾನ್ ತಂಡವು 14 ವರ್ಷಗಳ ಬಳಿಕ ಫೈನಲ್ ಪ್ರವೇಶ ಮಾಡಿದೆ. ರಾಜಸ್ಥಾನ್ ತಂಡವು 2008ರಲ್ಲಿ ಐಪಿಎಲ್ ಉದ್ಘಾಟನಾ ಆವೃತ್ತಿಯ ಫೈನಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಸೋಲಿಸಿ ಟ್ರೋಫಿಗೆ ಮುತ್ತಿಟ್ಟಿತ್ತು.
PublicNext
28/05/2022 07:41 am