ಅಹಮದಾಬಾದ್ : ಐಪಿಎಲ್ ನ 15ನೇ ಆವೃತ್ತಿಯ ಫೈನಲ್ ಪಂದ್ಯ ಇಂದು ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ ರಾಯಲ್ಸ್ ಮಧ್ಯೆ ನಡೆಯಲಿದೆ.ಇನ್ನು ಗುಜರಾತ್ ಚೊಚ್ಚಲ ಪ್ರಯತ್ನದಲ್ಲೇ ಫೈನಲ್ ಪ್ರವೇಶಿಸಿ ಭಾರೀ ನಿರೀಕ್ಷೆ ಮೂಡಿಸಿದ್ದು, ಮೊದಲ ಬಾರಿಗೆ ಟ್ರೋಫಿಗೆ ಮುತ್ತಿಡಲು ಕಾಯುತ್ತಿದ್ದರೆ, ರಾಜಸ್ಥಾನ ರಾಯಲ್ಸ್ 2008ರ ಬಳಿಕ ಮೊದಲ ಸಲ ಫೈನಲ್ ಪ್ರವೇಶಿಸಿದ್ದು, 2ನೇ ಟ್ರೋಫಿ ಗೆಲುವಿನ ನಿರೀಕ್ಷೆಯಲ್ಲಿದೆ.
ಸಂಭವನೀಯ ಆಟಗಾರ ಪಟ್ಟಿ
ಗುಜರಾತ್ ಟೈಟಾನ್ಸ್: ಶುಭ್ ಮನ್ ಗಿಲ್, ವೃದ್ಧಿಮಾನ್ ಸಾಹ, ಮ್ಯಾಥ್ಯೂ ವೇಡ್, ಹಾರ್ದಿಕ್ ಪಾಂಡ್ಯ(ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಸಾಯಿ ಕಿಶೋರ್, ಜೋಸೆಫ್/ಫಗ್ರ್ಯೂಸನ್, ಮೊಹಮದ್ ಶಮಿ, ಯಶ್ ದಯಾಳ್.
ರಾಜಸ್ಥಾನ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ನಾಯಕ), ದೇವದತ್ ಪಡಿಕ್ಕಲ್, ಶಿಮ್ರೊನ್ ಹೆಟ್ಮೇಯರ್, ರಿಯಾನ್ ಪರಾಗ್, ಆರ್.ಅಶ್ವಿನ್, ಟ್ರೆಂಟ್ ಬೌಲ್ಟ್, ಒಬೆಡ್ ಮೆಕಾಯ್, ಯಜುವೇಂದ್ರ ಚಹಲ್, ಪ್ರಸಿದ್ಧ್ ಕೃಷ್ಣ.
ಸ್ಥಳ: ಅಹಮದಾಬಾದ್, ಮೋದಿ ಕ್ರೀಡಾಂಗಣ
ಪಂದ್ಯ: ರಾತ್ರಿ 8ಕ್ಕೆ
PublicNext
29/05/2022 12:44 pm