ಅಹಮದಾಬಾದ್: ರಾಜಸ್ಥಾನ್ ರಾಯಲ್ಸ್ ವಿರುದ್ಧ ಐಪಿಎಲ್ 2022ರ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು 7 ವಿಕೆಟ್‌ಗಳಿಂದ ಗೆದ್ದು ಬೀಗಿದೆ. ಇದರೊಂದಿಗೆ ತಾನು ಆಡಿದ ಮೊದಲ ಟೂರ್ನಿಯಲ್ಲೇ ಟ್ರೋಫಿಗೆ ಮುತ್ತಿಕ್ಕಿದೆ.
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2022ರ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ತಂಡವು 9 ವಿಕೆಟ್ ನಷ್ಟಕ್ಕೆ 130 ರನ್ ಗಳಿಸಿತ್ತು. ಬಳಿಕ ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು 11 ಎಸೆತಗಳು ಬಾಕಿ ಇರುವಂತೆ 133 ರನ್ ಗಳಿಸಿ ಜಯ ಸಾಧಿಸಿದೆ.
PublicNext
29/05/2022 11:49 pm