ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ರಾಜೀನಾಮೆ?

ನವದೆಹಲಿ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕ್ರಿಕೆಟ್‌ ವೃತ್ತಿ ಜೀವನದಲ್ಲಿ 30 ವರ್ಷಗಳನ್ನು ಪೂರ್ಣಗೊಳಿಸಿದ್ದಾರೆ. ಈ ಸಂಬಂಧ ಇಂದು ಟ್ವೀಟ್ ಮಾಡಿರುವ ಅವರು ಹೊಸ ಇನ್ನಿಂಗ್ಸ್ ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. ಹೀಗಾಗಿ ಅವರು ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರಾ ಎನ್ನುವ ಪ್ರಶ್ನೆ ಎದ್ದಿದೆ.

ಟ್ವೀಟ್‌ನಲ್ಲಿ ಏನಿದೆ?:

'1992ರಲ್ಲಿ ಕ್ರಿಕೆಟ್‌ ವೃತ್ತಿ ಜೀವನ ಆರಂಭಿಸಿದ ನಾನು 2022ಕ್ಕೆ 30ನೇ ವರ್ಷ ಪೂರೈಸಿದ್ದೇನೆ. ಅಂದಿನಿಂದ ಈವರೆಗೂ ಕ್ರಿಕೆಟ್ ನನಗೆ ಬಹಳಷ್ಟು ನೀಡಿದೆ. ಎಲ್ಲಕ್ಕಿಂತ ಮುಖ್ಯವಾಗಿ, ಇದು ನನಗೆ ನಿಮ್ಮೆಲ್ಲರ ಬೆಂಬಲವನ್ನು ನೀಡಿದೆ. ಪ್ರಯಾಣದ ಭಾಗವಾಗಿರುವ, ನನ್ನನ್ನು ಬೆಂಬಲಿಸಿದ ಮತ್ತು ನಾನು ಇಂದು ಉನ್ನತ ಹುದ್ದೆಯನ್ನು ತಲುಪಲು ಸಹಾಯ ಮಾಡಿದ ಪ್ರತಿಯೊಬ್ಬರಿಗೂ ಧನ್ಯವಾದ ಹೇಳಲು ಬಯಸುತ್ತೇನೆ. ಇಂದು, ನಾನು ಏನನ್ನಾದರೂ ಪ್ರಾರಂಭಿಸಲು ಯೋಜಿಸುತ್ತಿದ್ದೇನೆ. ಅದು ಬಹುಶಃ ಬಹಳಷ್ಟು ಜನರಿಗೆ ಸಹಾಯ ಮಾಡುತ್ತದೆ. ನಾನು ನನ್ನ ಜೀವನದ ಈ ಅಧ್ಯಾಯವನ್ನು ಪ್ರವೇಶಿಸುವಾಗ ನಿಮ್ಮ ಬೆಂಬಲವನ್ನು ನೀವು ಮುಂದುವರಿಸುತ್ತೀರಿ ಎಂದು ನಾನು ಭಾವಿಸುತ್ತೇನೆ' ಎಂದು ದಾದಾ ಬರೆದುಕೊಂಡಿದ್ದಾರೆ.

Edited By : Vijay Kumar
PublicNext

PublicNext

01/06/2022 06:00 pm

Cinque Terre

21.68 K

Cinque Terre

4

ಸಂಬಂಧಿತ ಸುದ್ದಿ