ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಕ್ತಾಯಗೊಂಡಿದ್ದು ಆಟಗಾರರು ಇದೀಗ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಐದು ಪಂದ್ಯಗಳ ಟಿ20 ಸರಣಿಗೆ ಸಜ್ಜಾಗುತ್ತಿದ್ದಾರೆ. ಇಂದು ದಕ್ಷಿಣ ಆಫ್ರಿಕಾ ತಂಡವು ನವದೆಹಲಿಗೆ ತಲುಪಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಶಮಿ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಲಿದ್ದಾರೆ. ರಿಷಬ್ ಪಂತ್ ಉಪನಾಯಕನಾಗಿದ್ದಾರೆ. ಹಾರ್ದಿಕ್ ಪಾಂಡ್ಯ ಮತ್ತು ದಿನೇಶ್ ಕಾರ್ತಿಕ್ ತಂಡಕ್ಕೆ ಕಮ್‌ಬ್ಯಾಕ್ ಮಾಡುವ ಜೊತೆಗೆ ಕೆಲ ಯುವ ಆಟಗಾರರು ಕೂಡ ಆಯ್ಕೆಯಾಗಿದ್ದಾರೆ.
ಜೂನ್ 9ರಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಮೊದಲ ಟಿ20 ನಡೆಯಲಿದೆ. ಜೂನ್ 12 ಎರಡನೇ ಟಿ20 ಕಟಕ್, ಜೂನ್ 14 ಮೂರನೇ ಟಿ20 ವಿಶಾಖಪಟ್ಟಣಂ, ಜೂನ್ 17 ನಾಲ್ಕನೇ ಟಿ20 ರಾಜ್‌ಕೋಟ್, ಜೂನ್ 19 ಐದನೇ ಟಿ20 ಬೆಂಗಳೂರಿನಲ್ಲಿ ನಡೆಯಲಿದೆ.
ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ಉಪ ನಾಯಕ/ ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್.
ದಕ್ಷಿಣ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಅನ್ರಿಚ್ ನಾರ್ಟ್ಜೆ, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಬಾಡ, ಟಬ್ರೈಜ್ ಶಂಸಿ, ಟ್ರಿಸ್ಟನ್ ಸ್ಟಬ್ಸ್, ವ್ಯಾನ್ ಡೆರ್ ಡಸ್ಸೆನ್, ಮಾರ್ಕೊ ಜಾನ್ಸೆನ್.
PublicNext
02/06/2022 04:41 pm