ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಆಡಲಿರುವ ಟಿ20 ಸರಣಿಯ ಮೊದಲ ಪಂದ್ಯದ ಆನ್‌ಲೈನ್ ಟಿಕೆಟ್‌ಗಳು ಸೋಲ್ಡ್ ಔಟ್ ಆಗಿವೆ.
ಹೌದು. ಹರಿಣರ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯು ಜೂನ್ 9ರಿಂದ ಆರಂಭಗೊಳ್ಳಲಿದ್ದು, ಈಗಾಗಲೇ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡ ದೆಹಲಿಗೆ ಬಂದಿಳಿದಿದೆ. ತೆಂಬ ಬವುಮಾ ನೇತೃತ್ವದ ತಂಡದ ಆರ್‌ಟಿ-ಪಿಸಿಆರ್ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದಿನಿಂದಲೇ ಸರಣಿಗಾಗಿ ಅಭ್ಯಾಸ ಆರಂಭವಾಗಲಿದೆ.
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ 30 ತಿಂಗಳ ನಂತರ ಮೊದಲ ಅಂತರರಾಷ್ಟ್ರೀಯ ಪಂದ್ಯವನ್ನು ಆಯೋಜಿಸಲಾಗಿದೆ. ಹೀಗಾಗಿ ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯವನ್ನು ಕಣ್ತುಂಬಿಕೊಳ್ಳಲು ಬೇಡಿಕೆ ಹೆಚ್ಚಾಗಿದೆ. ಈಗಾಗಲೇ ಆನ್‌ಲೈನ್ ಟಿಕೆಟ್‌ಗಳು ಸೋಲ್ಡ್ ಔಟ್ ಆಗಿದ್ದು, ಶೀಘ್ರದಲ್ಲೇ ಆಫ್‌ಲೈನ್ ಟಿಕೆಟ್ ಮಾರಾಟಕ್ಕೆ ಸಿದ್ಧತೆ ನಡೆಸಿದೆ.
PublicNext
03/06/2022 08:16 pm