ನವದೆಹಲಿ: ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಇನ್ಸ್ಟಾಗ್ರಾಮ್ನಲ್ಲಿ ಇದೀಗ 200 ಮಿಲಿಯನ್ ಮಂದಿ ಫಾಲೋವರ್ಸ್ ಹೊಂದಿದ್ದಾರೆ. ಇಷ್ಟೊಂದು ಫಾಲೋವರ್ಸ್ ಇರುವ ವಿಶ್ವದ ಏಕೈಕ ಕ್ರಿಕೆಟಿಗ ಎಂಬ ದಾಖಲೆ ಕಿಂಗ್ ಕೊಹ್ಲಿಯ ಪಾಲಾಗಿದೆ. ಅಷ್ಟೇ ಅಲ್ಲದೆ ಇ ದಾಖಲೆ ಮಾಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ.
ತಮ್ಮ ಚಿತ್ರಗಳು ಮತ್ತು ಕ್ಲಿಪ್‌ಗಳನ್ನು ಹೊಂದಿರುವ ವಿಡಿಯೋವನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿರುವ ವಿರಾಟ್ ಕೊಹ್ಲಿ, "200 ಮಿಲಿಯನ್ ಸ್ಟ್ರಾಂಗ್. ನಿಮ್ಮೆಲ್ಲರ ಬೆಂಬಲಕ್ಕಾಗಿ ಇನ್‌ಸ್ಟಾ ಫ್ಯಾಮ್‌ಗೆ ಧನ್ಯವಾದಗಳು" ಎಂದು ಬರೆದಿದ್ದಾರೆ.
ಕ್ರೀಡಾಕ್ಷೇತ್ರದಲ್ಲಿ ಅತೀ ಹೆಚ್ಚು ಫಾಲೋವರ್ಸ್ ಹೊಂದಿದ ವಿಶ್ವದ ಮೂರನೇ ಆಟಗಾರ ಎಂಬ ಹೆಗ್ಗಳಿಕೆಗೂ ಕೊಹ್ಲಿ ಪಾತ್ರರಾಗಿದ್ದಾರೆ. ಈ ಪಟ್ಟಿಯಲ್ಲಿ ಪೋರ್ಚುಗಲ್ನ ಖ್ಯಾತ ಫುಟ್ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ ಅಗ್ರಸ್ಥಾನದಲ್ಲಿದ್ದಾರೆ. ರೊನಾಲ್ಡೊಗೆ 451 ಮಿಲಿಯನ್ ಫಾಲೋವರ್ಸ್ ಇದ್ದರೆ, 2ನೇ ಸ್ಥಾನದಲ್ಲಿರುವ ಅರ್ಜೆಂಟೀನಾ ಫುಟ್ಬಾಲ್ ಕಿಂಗ್ ಲಿಯೋನಲ್ ಮೆಸ್ಸಿ 334 ಫಾಲೋವರ್ಸ್ ಹೊಂದಿದ್ದಾರೆ. ಇದೀಗ 20 ಕೋಟಿ ಫಾಲೋವರ್ಸ್ನೊಂದಿಗೆ ವಿರಾಟ್ ಕೊಹ್ಲಿ ಮೂರನೇ ಆಟಗಾರನಾಗಿ ಹೊರಹೊಮ್ಮಿದ್ದಾರೆ.
PublicNext
08/06/2022 10:00 am