ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟೀಂ ಇಂಡಿಯಾಕ್ಕೆ ದಿಢೀರ್ ನಾಯಕನಾದ ರಿಷಭ್ ಪಂತ್ ಮೊದಲ ಪ್ರತಿಕ್ರಿಯೆ

ನವದೆಹಲಿ: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಕ್ರಿಕೆಟ್‌ ಸರಣಿ ಆರಂಭಕ್ಕೆ ಇನ್ನು ಕೆಲವೇ ಗಂಟೆಗಳು ಮಾತ್ರವೇ ಬಾಕಿ ಇರುವಾಗ ಟೀಂ ಇಂಡಿಯಾದ ನಾಯಕ ಕೆ.ಎಲ್. ರಾಹುಲ್ ತಂಡದಿಂದ ಹೊರ ಬಿದ್ದಿದ್ದಾರೆ. ಇದರಿಂದಾಗಿ ಉಪನಾಯಕನ ಸ್ಥಾನ ಪಡೆದಿದ್ದ ರಿಷಭ್ ಪಂತ್‌ ಭಾರತ ತಂಡವನ್ನು ಮುನ್ನಡೆಸಲಿದ್ದು, ಆಲ್‌ರೌಂಡರ್ ಹಾರ್ದಿಕ್‌ ಪಾಂಡ್ಯಗೆ ವೈಸ್‌-ಕ್ಯಾಪ್ಟನ್‌ ಪಟ್ಟ ಸಿಕ್ಕಿದೆ. ಈ ಬಗ್ಗೆ ಬಿಸಿಸಿಐ ಅಧಿಕೃತ ವರದಿ ಬಿಡುಗಡೆ ಮಾಡಿದೆ.

ಬುಧವಾರ ಸಂಜೆ ಟೀಂ ಇಂಡಿಯಾ ಸುದ್ದಿಗೋಷ್ಠಿಗೆ ಇನ್ನು ಕೆಲವೇ ನಿಮಿಷಗಳು ಬಾಕಿ ಇರುವಂತೆ ನಾಯಕನಾಗಿ ಆಯ್ಕೆಯಾಗಿದ್ದರ ಕುರಿತು ರಿಷಭ್ ಪಂತ್ ಶಾಕ್ ಆದರು. ಇದರಿಂದ ಹೊರಬರಲು ಸ್ವಲ್ಪ ಸಮಯವೇ ಆಗಿತೆಂದು ಪಂತ್ ತಮ್ಮ ಮೊದಲ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.

"ನನಗೆ ಅದನ್ನು ಇನ್ನೂ ಅರಗಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಒಂದು ಗಂಟೆಯ ಹಿಂದೆ ನನಗೆ ಗೊತ್ತಾಯಿತು" ಎಂದು ಪಂತ್ ಪಂದ್ಯ ಪೂರ್ವ ಪತ್ರಿಕಾಗೋಷ್ಠಿಯಲ್ಲಿ ನಗುತ್ತಾ ಹೇಳಿದರು.

"ಇದು ತುಂಬಾ ಒಳ್ಳೆಯ ಭಾವನೆ, ಆದ್ರೆ ತುಂಬಾ ಒಳ್ಳೆಯ ಸಂದರ್ಭಗಳಲ್ಲಿ ಬಂದಿಲ್ಲ. ಆದ್ರೂ ಕೂಡ ಅದೇ ಸಮಯದಲ್ಲಿ ನನಗೆ ಸಂತೋಷವಾಗಿದೆ. ಭಾರತ ತಂಡವನ್ನು ಮುನ್ನಡೆಸಲು ನನಗೆ ಈ ಅವಕಾಶವನ್ನು ನೀಡಿದ್ದಕ್ಕಾಗಿ ನಾನು ಬಿಸಿಸಿಐಗೆ ಧನ್ಯವಾದ ಹೇಳಲು ಬಯಸುತ್ತೇನೆ. ನನ್ನ ಕ್ರಿಕೆಟ್ ವೃತ್ತಿಜೀವನದ ಏರಿಳಿತದ ನನ್ನ ಪ್ರಯಾಣದಲ್ಲಿ ನನ್ನನ್ನು ಬೆಂಬಲಿಸಿದ್ದಕ್ಕಾಗಿ ಎಲ್ಲಾ ಹಿತೈಷಿಗಳಿಗೆ ಧನ್ಯವಾದಗಳು'' ಎಂದು ರಿಷಭ್ ಪಂತ್ ಹೇಳಿದ್ದಾರೆ.

"ನಾಯಕನಾಗಿ, ಇದು ನನಗೆ ಬಹಳಷ್ಟು ಸಹಾಯ ಮಾಡುತ್ತದೆ (ಐಪಿಎಲ್‌ನಲ್ಲಿ ಮುನ್ನಡೆಸುವುದು). ಏಕೆಂದರೆ ನೀವು ಮತ್ತೆ ಮತ್ತೆ ಅದೇ ಕೆಲಸವನ್ನು ಮಾಡುತ್ತಿರುವಾಗ ನೀವು ಸುಧಾರಿಸುತ್ತೀರಿ. ನಾನು ತಪ್ಪುಗಳಿಂದ ಕಲಿಯುತ್ತಲೇ ಇರುವ ವ್ಯಕ್ತಿ ಮತ್ತು ಮುಂದಿನ ದಿನಗಳಲ್ಲಿ ಅದು ನನಗೆ ಸಹಾಯ ಮಾಡುತ್ತದೆ ಎಂದು ನಾನು ಭಾವಿಸುತ್ತೇನೆ'' ಎಂದು ರಿಷಭ್ ತಮ್ಮ ನಾಯಕತ್ವದ ಕುರಿತು ತಿಳಿಸಿದರು.

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಇಂದು (ಜೂ. 9) ಭಾರತ-ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು, ಅದಕ್ಕೂ ಮೊದಲೇ ಕೆ.ಎಲ್ ರಾಹುಲ್ ಮತ್ತು ಕುಲ್‌ದೀಪ್ ಯಾದವ್ ಗಾಯಗೊಂಡು ಸರಣಿಯಿಂದಲೇ ಹೊರಬಿದ್ದಿರುವುದು ತಂಡಕ್ಕೆ ಹೊಡೆತ ನೀಡಿದೆ.

Edited By : Vijay Kumar
PublicNext

PublicNext

09/06/2022 07:27 am

Cinque Terre

50.95 K

Cinque Terre

0

ಸಂಬಂಧಿತ ಸುದ್ದಿ