ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂದು ಭಾರತ-ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯ: ಬ್ಯಾಟರ್​​ಗಳಿಗೆ ದ್ರಾವಿಡ್ ವಾರ್ನಿಂಗ್

ನವದೆಹಲಿ: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಟಿ20 ಸರಣಿಗೆ ಇಂದು ಚಾಲನೆ ಸಿಗಲಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾ ಯಂಗ್ ಇಂಡಿಯಾವಾಗಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ವಿಶ್ರಾಂತಿಯ ಮೊರೆ ಹೋದರೆ ನಾಯಕನ ಸ್ಥಾನ ಅಲಂಕರಿಸಿದ್ದ ಕೆಎಲ್ ರಾಹುಲ್ ನಿನ್ನೆ ಇಂಜುರಿಯಿಂದಾಗಿ ಸರಣಿಯಿಂದ ಹೊರ ನಡೆದಿದ್ದಾರೆ. ಹೀಗಾಗಿ ರಿಷಭ್ ಪಂತ್ ಕ್ಯಾಪ್ಟನ್ ಪಟ್ಟ ತೊಟ್ಟಿದ್ದು ಉಪ ನಾಯಕನ ಜವಾಬ್ದಾರಿ ಹಾರ್ದಿಕ್ ಪಾಂಡ್ಯಗೆ ಒಲಿದುಬಂದಿದೆ. ಒಟ್ಟಾರೆ ಭಾರತೀಯ ಯುವ ಪಡೆ ಹೊಸ ಸವಾಲಿಗೆ ಸಜ್ಜಾಗುತ್ತಿದ್ದು ನವದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ.

ಟೀಂ ಇಂಡಿಯಾ ಬ್ಯಾಟರ್‌ಗಳಿಗೆ ಹೈ-ಸ್ಟೈಕ್​ರೇಟ್​ನಲ್ಲಿ ಬ್ಯಾಟ್​ ಬೀಸುವಂತೆ ಕೋಚ್ ರಾಹುಲ್ ದ್ರಾವಿಡ್​ ಸೂಚಿಸಿದ್ದಾರೆ. ಹೈ-ಸ್ಕೋರಿಂಗ್​ ಗೇಮ್​ನಲ್ಲಿ ಆಟಗಾರರ ನಿಧಾನಗತಿಯ ಬ್ಯಾಟಿಂಗ್​ ತಂಡಕ್ಕೆ ಹಿನ್ನಡೆಯಾಗ್ತಿದೆ. ಹೀಗಾಗಿ ಈ ಬಗ್ಗೆ ಗಂಭೀರವಾಗಿ ಗಮನ ಹರಿಸುವಂತೆ ಹೆಡ್​ ಕೋಚ್​ ದ್ರಾವಿಡ್​ ಎಲ್ಲಾ ಆಟಗಾರರಿಗೆ ಖಡಕ್​ ವಾರ್ನಿಂಗ್​ ಮಾಡಿದ್ದಾರೆ.

ಭಾರತ ತಂಡ: ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ನಾಯಕ/ ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್.

ದಕ್ಷಿಣ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಅನ್ರಿಚ್ ನಾರ್ಟ್ಜೆ, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಬಾಡ, ಟಬ್ರೈಜ್ ಶಂಸಿ, ಟ್ರಿಸ್ಟನ್ ಸ್ಟಬ್ಸ್, ವ್ಯಾನ್ ಡೆರ್ ಡಸ್ಸೆನ್, ಮಾರ್ಕೊ ಜಾನ್ಸೆನ್.

Edited By : Vijay Kumar
PublicNext

PublicNext

09/06/2022 08:40 am

Cinque Terre

45.91 K

Cinque Terre

3