ನವದೆಹಲಿ: ಡೇವಿಡ್ ಮಿಲ್ಲರ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಸ್ಫೋಟಕ ಬ್ಯಾಟಿಂಗ್ ಸಹಾಯದಿಂದ ದಕ್ಷಿಣ ಆಫ್ರಿಕಾ ತಂಡವು ಭಾರತದ ವಿರುದ್ಧ 7 ವಿಕೆಟ್‌ಗಳಿಂದ ಗೆದ್ದು ಬೀಗಿದೆ .
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ನಡೆದ ಭಾರತ ವಿರುದ್ಧದ 5 ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ತೆಂಬಾ ಬುವುಮಾ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು 4 ವಿಕೆಟ್ ನಷ್ಟಕ್ಕೆ 211 ರನ್ ಗಳಿಸಿತ್ತು. ಬಳಿಕ ಬ್ಯಾಟಿಂಗ್ ಮಾಡಿದ ದ.ಆಫ್ರಿಕಾ ತಂಡವು 5 ಎಸೆತಗಳು ಬಾಕಿ ಇರುವಂತೆ 3 ವಿಕೆಟ್ ನಷ್ಟಕ್ಕೆ 212 ರನ್ ಗಳಿಸಿ ಗೆದ್ದು ಬೀಗಿದೆ.
ದಕ್ಷಿಣ ಆಫ್ರಿಕಾ ಪರ ಡೇವಿಡ್ ಮಿಲ್ಲರ್ ಅಜೇಯ 64 ರನ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಅಜೇಯ 75 ರನ್ ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.
PublicNext
09/06/2022 10:34 pm