ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IND vs SA 2nd T20: ಟೀಂ ಇಂಡಿಯಾಗೆ ಮತ್ತೊಂದು ಸೋಲು

ಕೋಲ್ಕತ್ತಾ: ಹೆನ್ರಿಚ್ ಕ್ಲಾಸೆನ್ ಭರ್ಜರಿ ಬ್ಯಾಟಿಂಗ್ ಸಹಾಯದಿಂದ ದಕ್ಷಿಣ ಆಫ್ರಿಕಾ ತಂಡವು ಭಾರತದ ವಿರುದ್ಧ 4 ವಿಕೆಟ್‌ಗಳಿಂದ ಗೆದ್ದು ಬೀಗಿದೆ.

ಭಾರತದ ವಿರುದ್ಧದ 5 ಟಿ20 ಪಂದ್ಯಗಳ ಸರಣಿಯ ಎರಡೇ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡವು ಮೊದಲು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ 6 ವಿಕೆಟ್ ನಷ್ಟಕ್ಕೆ 148 ರನ್ ಗಳಿಸಿತ್ತು. ಬಳಿಕ ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡವು 10 ಎಸೆತಗಳು ಬಾಕಿ ಇರುವಂತೆ 6 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿ ಜಯ ಸಾಧಿಸಿದೆ. ದಕ್ಷಿಣ ಆಫ್ರಿಕಾ ಪರ ಹೆನ್ರಿಚ್ ಕ್ಲಾಸೆನ್ 81 ರನ್ ಗಳಿಸಿದರು.

Edited By : Vijay Kumar
PublicNext

PublicNext

12/06/2022 10:41 pm

Cinque Terre

33.99 K

Cinque Terre

1

ಸಂಬಂಧಿತ ಸುದ್ದಿ