ಬೆಂಗಳೂರು: ಟೀಂ ಇಂಡಿಯಾ ವಿರುದ್ಧದ ಟಿ20 ಸರಣಿಯ 5ನೇ ಹಾಗೂ ಕೊನೆಯ ಪಂದ್ಯದಲ್ಲೂ ದಕ್ಷಿಣ ಆಫ್ರಿಕಾ ತಂಡವು ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ.
ಮೊದಲೆರಡು ಪಂದ್ಯಗಳಲ್ಲಿ ಸೋತ ನಂತರ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿ ಸರಣಿಯನ್ನು 2-2ರಲ್ಲಿ ಸಮಬಲಗೊಳಿಸಿದೆ. ಇಂದು ಬೆಂಗಳೂರಿನಲ್ಲಿ ನಡೆಯಲಿರುವ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಐದನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಭಾರತದ ಯುವ ತಂಡ ತಮ್ಮ ದೌರ್ಬಲ್ಯಗಳನ್ನು ಮೆಟ್ಟಿ ನಿಂತು ಗೆಲುವು ದಾಖಲಿಸುವ ಉದ್ದೇಶದಿಂದ ತಂಡವಾಗಿ ಉತ್ತಮ ಪ್ರದರ್ಶನ ತೋರಲಿದೆ. ಇದಕ್ಕಾಗಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಕೂಡ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ.
PublicNext
19/06/2022 06:46 pm