ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IND vs SA: ಭಾರಿ ಮಳೆಯಿಂದ ಕೊನೆಯ ಪಂದ್ಯ ರದ್ದು- ಸರಣಿ ಸಮಬಲ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ-ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯ ಮಳೆಯಿಂದ ರದ್ದಾಗಿದೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ-ದಕ್ಷಿಣ ಆಫ್ರಿಕಾ ನಡುವಣ ಪಂದ್ಯವು ಮಳೆಯ ಕಾರಣ ರದ್ದಾಗಿದೆ ಎಂದು ಬಿಸಿಸಿಐ ಮಾಹಿತಿ ನೀಡಿದೆ. ಆ ಮೂಲಕ ಐದು ಪಂದ್ಯಗಳ ಟಿ20 ಸರಣಿ 2-2ರಲ್ಲಿ ಉಭಯ ತಂಡಗಳು ಸಮಬಲ ಸಾಧಿಸಿದಂತಾಗಿದೆ.

ಟಾಸ್​ಗೂ ಮುನ್ನ ಮಳೆಯಾಗಿದ್ದರಿಂದ ಪಂದ್ಯವು ವಿಳಂಬವಾಗಿ ಶುರುವಾಗಿತ್ತು. ಅದರಂತೆ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್​ ಆರಂಭಿಸಿದ ಟೀಮ್ ಇಂಡಿಯಾ ಆರಂಭದಲ್ಲೇ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಲುಂಗಿ ಎನ್​ಗಿಡಿ ಎಸೆದ 2ನೇ ಓವರ್​ನ ಕೊನೆಯ ಎಸೆತದಲ್ಲಿ ಇಶಾನ್ ಕಿಶನ್ (15) ಕ್ಲೀನ್ ಬೌಲ್ಡ್ ಆಗಿ ಹೊರನಡೆದರೆ, ಎನ್​ಗಿಡಿ ಎಸೆದ 4ನೇ ಓವರ್​ನ 2ನೇ ಎಸೆತದಲ್ಲಿ ಋತುರಾಜ್ ಗಾಯಕ್ವಾಡ್ (10) ಕ್ಯಾಚ್ ನೀಡಿ ನಿರ್ಗಮಿಸಿದರು. ಈ ವೇಳೆ ಮತ್ತೆ ಮಳೆ ಸುರಿಯಲಾರಂಭಿಸಿದ ಕಾರಣ ಪಂದ್ಯವನ್ನು ಸ್ಥಗಿತಗೊಳಿಸಲಾಗಿತ್ತು. ಬವಳಿಕ ರದ್ದುಗೊಳಿಸಲಾಯಿತು.

Edited By : Vijay Kumar
PublicNext

PublicNext

19/06/2022 10:55 pm

Cinque Terre

42.75 K

Cinque Terre

0

ಸಂಬಂಧಿತ ಸುದ್ದಿ