ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IND vs ENG: ಭಾರತ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಗೆದ್ದು ಮೈಲುಗಲ್ಲು ನೆಟ್ಟ ಇಂಗ್ಲೆಂಡ್

ಲಂಡನ್: ಭಾರತ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 7 ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಭಾರತ ವಿರುದ್ಧದ ಟೆಸ್ಟ್ ಪಂದ್ಯದ ಇತಿಹಾಸದಲ್ಲಿ ಇಂಗ್ಲೆಂಡ್ ತನ್ನ ಅತ್ಯಧಿಕ ಯಶಸ್ವಿ ಚೇಸ್ ಅನ್ನು ದಾಖಲಿಸಿದೆ.

ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಮರುನಿಗದಿಪಡಿಸಲಾದ ಏಕೈಕ ಟೆಸ್ಟ್ (Test) ಪಂದ್ಯವನ್ನು ಇಂಗ್ಲೆಂಡ್​ ವಿರುದ್ಧ ಎಡ್ಜ್ ಬಾಸ್ಟನ್ ಮೈದಾನದಲ್ಲಿ ನಡೆಯಿತು. ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದಿದ್ದ ಭಾರತ ತಂಡವು ರಿಷಭ್ ಪಂತ್ ಮತ್ತು ರವೀಂದ್ರ ಜಡೇಜಾ ಆಕರ್ಷಕ ಶತಕ ಹಾಗೂ ಅಂತಿಮವಾಗಿ ಜಸ್‌ಪ್ರೀತ್ ಬೂಮ್ರಾ ಅಬ್ಬರದ ನೆರವಿನಿಂದ ಭಾರತ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 84.5 ಓವರ್​ ಗಳಲ್ಲಿ 10 ವಿಕೆಟ್ ನಷ್ಟಕ್ಕೆ 416 ರನ್ ಗಳಿಸಿತ್ತು. ನಂತರ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್​ 284 ರನ್ ಗೆ ಸರ್ವ ಪತನ ಕಂಡಿತ್ತು.

ಇನ್ನು 2ನೇ ಇನ್ನಿಂಗ್ಸ್ ಆರಂಭಿಸಿದ ಭಾರತ ತಡ 245 ರನ್ ಗಳಿಗೆ 10 ವಿಕೆಟ್ ಕಳೆದುಕೊಳ್ಳುವ ಮೂಲಕ ಇಂಗ್ಲೆಂಡ್​ ತಂಡಕ್ಕೆ 378 ರನ್‌ಗಳ ಟಾರ್ಗೇಟ್ ನೀಡಿತ್ತು. ಈ ಮೊತ್ತ ಬೆನ್ನಟ್ಟಿರುವ ಇಂಗ್ಲೆಂಡ್ ತಂಡವು 57 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 378 ರನ್ ಗಳಿಸಿ ಗೆಲುವು ದಾಖಲಿಸಿದೆ.

Edited By : Vijay Kumar
PublicNext

PublicNext

05/07/2022 05:05 pm

Cinque Terre

126.69 K

Cinque Terre

2