ನವದೆಹಲಿ: ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡ ಪ್ರಕಟಗೊಂಡಿದೆ. ಮಹತ್ವದ ಬದಲಾವಣೆಯಲ್ಲಿ ಅನುಭವಿ ಬ್ಯಾಟರ್ ಶಿಖರ್ ಧವನ್‌ಗೆ ನಾಯಕತ್ವದ ಜವಾಬ್ದಾರಿ ನೀಡಲಾಗಿದೆ.
ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಹಿರಿಯ ಆಯ್ಕೆ ಸಮಿತಿಯು ವೆಸ್ಟ್ ಇಂಡೀಸ್ ವಿರುದ್ಧದ ಈ 3 ಪಂದ್ಯಗಳ ಸರಣಿಗೆ ಜುಲೈ 6 ಬುಧವಾರದಂದು ತಂಡವನ್ನು ಪ್ರಕಟಿಸಿದೆ. ಊಹಿಸಿದಂತೆ, ತಂಡದ ಪ್ರಮುಖ ಹಿರಿಯ ಮತ್ತು ಬಹು-ಫಾರ್ಮ್ಯಾಟ್ ಆಟಗಾರರಿಗೆ ಈ ಪ್ರವಾಸದಲ್ಲಿ ವಿಶ್ರಾಂತಿ ನೀಡಲಾಗಿದೆ. ಇದರಲ್ಲಿ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಬ್ ಪಂತ್, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ಅವರ ಹೆಸರುಗಳು ಪ್ರಮುಖವಾಗಿವೆ. ಅದೇ ಸಮಯದಲ್ಲಿ, ಶುಭಮನ್ ಗಿಲ್ ಏಕದಿನ ತಂಡಕ್ಕೆ ಮರಳಿದ್ದಾರೆ.
ಭಾರತ ತಂಡ ಹೀಗಿದೆ:
ಶಿಖರ್ ಧವನ್ (ನಾಯಕ), ರವೀಂದ್ರ ಜಡೇಜಾ (ಉಪ ನಾಯಕ), ಋತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಯಜುವೇಂದ್ರ ಚಾಹಲ್, ಅಕ್ಸರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್ ಹಾಗೂ ಅರ್ಷದೀಪ್ ಸಿಂಗ್.
PublicNext
06/07/2022 04:14 pm