ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಾರತ vs ಪಾಕಿಸ್ತಾನ ಪಂದ್ಯಕ್ಕೆ ದಿನಾಂಕ ಫಿಕ್ಸ್‌- ಎಲ್ಲಿ, ಯಾವಾಗ ಗೊತ್ತಾ? ಇಲ್ಲಿದೆ ನೋಡಿ ಮಾಹಿತಿ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಸಾಮಾನ್ಯ ಸರಣಿಗಳು ಆಯೋಜನೆಯಾಗುವುದಿಲ್ಲ, ಬದಲಾಗಿ ಐಸಿಸಿ ಲೀಗ್‌ಗಳಲ್ಲಿ ಮಾತ್ರ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಹೌದು, ರಾಜಕೀಯ ಮತ್ತು ಸುರಕ್ಷತೆಯ ಕಾರಣದಿಂದಾಗಿ ಭಾರತ ಪಾಕಿಸ್ತಾನ ಪ್ರವಾಸ ಕೈಗೊಳ್ಳುವುದನ್ನು ಹಾಗೂ ಪಾಕಿಸ್ತಾನ ಭಾರತ ಪ್ರವಾಸವನ್ನು ಕೈಗೊಳ್ಳುವುದನ್ನು ನಿಷೇಧಿಸಲಾಗಿದೆ.

ಈ ಮೂಲಕ ಇತ್ತಂಡಗಳ ನಡುವೆ ನಡೆಯುವ ಪಂದ್ಯಗಳ ಸಂಖ್ಯೆ ಕಡಿಮೆಯಾಗಿದ್ದು, ಕ್ರೇಜ್ ದುಪ್ಪಟ್ಟಾಗಿದೆ. ಕೊನೆಯದಾಗಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಕಳೆದ ವರ್ಷ ಯುಎಇಯಲ್ಲಿ ನಡೆದಿದ್ದ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಪಂದ್ಯವೊಂದರಲ್ಲಿ ಮುಖಾಮುಖಿಯಾಗಿದ್ದವು. ಇದಾದ ಬಳಿಕ ಇದೀಗ ಮತ್ತೊಮ್ಮೆ ಭಾರತ ಮತ್ತು ಪಾಕಿಸ್ತಾನ ತಂಡಗಳ ಸೆಣಸಾಟಕ್ಕೆ ವೇದಿಕೆ ಸಜ್ಜಾಗಿದೆ.

ಶ್ರೀಲಂಕಾದಲ್ಲಿ ನಡೆಯಲಿರುವ ಈ ಬಾರಿಯ ಏಷ್ಯಾಕಪ್ ಟೂರ್ನಿ ಆಗಸ್ಟ್ 27ರಿಂದ ಆರಂಭವಾಗಲಿದ್ದು, ಭಾರತ, ಶ್ರೀಲಂಕಾ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ತಂಡಗಳು ಈಗಾಗಲೇ ಟೂರ್ನಿಯಲ್ಲಿ ತಮ್ಮ ಸ್ಥಾನಗಳನ್ನು ಗಿಟ್ಟಿಸಿಕೊಂಡಿವೆ. ವರದಿಗಳ ಪ್ರಕಾರ, ಭಾರತ vs ಪಾಕಿಸ್ತಾನವು ಆಗಸ್ಟ್ 28 ರಂದು ನಡೆಯಲಿದೆ.

ಇನ್ನು ಆಗಸ್ಟ್ 21ರಿಂದ ಕ್ವಾಲಿಫೈಯರ್ ಸುತ್ತಿನ ಪಂದ್ಯಗಳು ನಡೆಯಲಿದ್ದು, ಈ ಸುತ್ತಿನಲ್ಲಿ ಯುಎಇ, ನೇಪಾಳ, ಹಾಂಗ್‌ಕಾಂಗ್ ಮತ್ತು ಒಮನ್ ಸೇರಿದಂತೆ ಇತರೆ ತಂಡಗಳು ಕಣಕ್ಕಿಳಿಯಲಿವೆ ಎಂದು ವರದಿ ತಿಳಿಸಿದೆ.

Edited By : Vijay Kumar
PublicNext

PublicNext

07/07/2022 01:06 pm

Cinque Terre

55.32 K

Cinque Terre

0

ಸಂಬಂಧಿತ ಸುದ್ದಿ