ಬರ್ಮಿಂಗ್‌ಹ್ಯಾಮ್: ರವೀಂದ್ರ ಜಡೇಜಾ ಬ್ಯಾಟಿಂಗ್ ಅಬ್ಬರ, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಯಜುವೇಂದ್ರ ಚಾಹಲ್ ಬೌಲಿಂಗ್ ದಾಳಿಯಿಂದ ಭಾರತವು ಇಂಗ್ಲೆಂಡ್ ವಿರುದ್ಧ 49 ರನ್‌ಗಳಿಂದ ಗೆದ್ದು ಬೀಗಿದೆ. ಈ ಮೂಲಕ 2-0 ಅಂತರದಿಂದ ಸರಣಿ ವಶಕ್ಕೆ ಪಡೆದುಕೊಂಡಿದೆ.
ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್ ಸ್ಟೇಡಿಯಂನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು ರವೀಂದ್ರ ಜಡೇಜಾ 46 ರನ್ ಹಾಗೂ ರೋಹಿತ್ ಶರ್ಮಾ 31 ರನ್‌ಗಳ ಸಹಾಯದಿಂದ 8 ವಿಕೆಟ್ ನಷ್ಟಕ್ಕೆ 170 ರನ್ ಗಳಿಸಿತ್ತು.
ಬಳಿಕ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡವು 17 ಓವರ್‌ಗಳಲ್ಲಿ ಎಲ್ಲಾ 10 ವಿಕೆಟ್ ನಷ್ಟಕ್ಕೆ 121 ರನ್ ಗಳಿಸಿ ಸೋಲು ಒಪ್ಪಿಕೊಂಡಿತು. ಇಂಗ್ಲೆಂಡ್ ಪರ ಮೋಯಿನ್ ಅಲಿ 35 ರನ್ ಹಾಗೂ ಡೇವಿಡ್ ವಿಲ್ಲಿ 33 ರನ್ ಗಳಿಸಿದರು. ಇನ್ನು ಭಾರತದ ಪರ ಭುವನೇಶ್ವರ್ ಕುಮಾರ್ 3 ವಿಕೆಟ್, ಜಸ್ಪ್ರೀತ್ ಬುಮ್ರಾ ಹಾಗೂ ಯಜುವೇಂದ್ರ ಚಾಹಲ್ ತಲಾ 2 ವಿಕೆಟ್, ಹಾರ್ದಿಕ್ ಪಾಂಡ್ಯ ಹಾಗೂ ಹರ್ಷಲ್ ಪಟೇಲ್ ತಲಾ 1 ವಿಕೆಟ್ ಕಿತ್ತು ಮಿಂಚಿದರು.
PublicNext
09/07/2022 10:29 pm