ಕಿಯಾ ಓವಲ್: ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್‌ಗಳಾದ ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಬೌಲಿಂಗ್ ದಾಳಿಗೆ ನಲುಗಿದ ಇಂಗ್ಲೆಂಡ್ ತಂಡವು ಭಾರತಕ್ಕೆ 111 ರನ್‌ಗಳ ಗುರಿ ನೀಡಿದೆ.
ಕಿಯಾ ಓವಲ್‌ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡವು 25.2 ಓವರ್‌ಗಳಲ್ಲಿ ಎಲ್ಲಾ 10 ವಿಕೆಟ್‌ಗಳ ನಷ್ಟಕ್ಕೆ 110 ರನ್ ಗಳಿಸಿದೆ. ತಂಡದ ಪರ ನಾಯಕ ಜೋಸ್ ಬಟ್ಲರ್ 30 ರನ್, ಮೋಯಿನ್ ಅಲಿ 14 ರನ್ ಹಾಗೂ ಡೇವಿಡ್ ವಿಲ್ಲಿ 21 ರನ್ ಗಳಿಸಿದರು.
ಇನ್ನು ಟೀಂ ಇಂಡಿಯಾ ಪರ ಜಸ್‌ಪ್ರೀತ್ ಬುಮ್ರಾ ಮಿಂಚಿನ ಬೌಲಿಂಗ್ ಪ್ರದರ್ಶನ ನೀಡಿದರು. ಅವರು 7.2 ಓವರ್ ಬೌಲಿಂಗ್ ಮಾಡಿ, 3 ಓವರ್ ಮೇಡನ್ ಮಾಡಿ, ಕೇವಲ 19 ರನ್ ನೀಡಿ ಪ್ರಮುಖ 6 ವಿಕೆಟ್ ಉರುಳಿಸಿದರು. ಇನ್ನು ಮೊಹಮ್ಮದ್ ಶಮಿ 3 ವಿಕೆಟ್ ಹಾಗೂ ಪ್ರಸಿದ್ಧ್ ಕೃಷ್ಣ 1 ವಿಕೆಟ್ ಪಡೆದು ಮಿಂಚಿದರು.
PublicNext
12/07/2022 07:41 pm