ನವದೆಹಲಿ: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಭಾರತ ತಂಡವನ್ನು ಪ್ರಕಟಿಸಿದೆ.
ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಭವಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರನ್ನು ತಂಡದಿಂದ ಕೈಬಿಡಲಾಗಿದೆ. ಇನ್ನು ಕೆಎಲ್ ರಾಹುಲ್ ಮತ್ತು ಕುಲ್ದೀಪ್ ಯಾದವ್ ಅವರಿಗೆ ತಂಡದಲ್ಲಿ ಅವಕಾಶ ನೀಡಿದ್ದರೂ ಫಿಟ್ನೆಸ್‌ಗೆ ಒಳಪಡಿಸಲಾಗಿದೆ. ತಂಡದಲ್ಲಿ ರವಿಚಂದ್ರನ್ ಅಶ್ವಿನ್, ರವಿ ಬಿಷ್ಣೋಯ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್ ಮತ್ತು ಅವೇಶ್ ಖಾನ್ ಕೂಡ ಇದ್ದಾರೆ.
ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಕೆ.ಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಆರ್ ಅಶ್ವಿನ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಭುವನೇಶ್ವರ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.
PublicNext
14/07/2022 03:02 pm